nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಸೆಪ್ಟಂಬರ್ 14ರಂದು ರಾಷ್ಟ್ರೀಯ ಲೋಕ್ ಆದಾಲತ್
    ತುಮಕೂರು August 14, 2024

    ತುಮಕೂರು: ಸೆಪ್ಟಂಬರ್ 14ರಂದು ರಾಷ್ಟ್ರೀಯ ಲೋಕ್ ಆದಾಲತ್

    By adminAugust 14, 2024No Comments2 Mins Read
    rashtriya lok adalat

    ತುಮಕೂರು: ಜಿಲ್ಲೆಯ ವಿವಿಧ ನ್ಯಾಯಲಯಗಳಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದುಕೊಂಡಿರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸುವ ಉದ್ದೇಶದಿಂದ ಸೆಪ್ಟಂಬರ್ 14ರಂದು ರಾಷ್ಟ್ರೀ ಲೋಕ್ ಆದಾಲತ್ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ್ ಕುಮಾರ್ ತಿಳಿಸಿದರು.

    ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ನ್ಯಾಯಾಲಯಗಳಲ್ಲಿ ಹೆಚ್ಚುತ್ತಿರುವ  ಪ್ರಕರಣಗಳನ್ನು ಕಡಿಮೆ ಮಾಡುವುದು ಮತ್ತು ಸಾರ್ವಜನಿಕರು ನ್ಯಾಯಾಲಯಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಲೋಕ್ ಆದಾಲತ್‌ಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕಳೆದ ಜುಲೈ ತಿಂಗಳಲ್ಲಿ ನಡೆದ ಲೋಕ್ ಆದಾಲತ್‌ನಲ್ಲಿ ಜಿಲ್ಲೆಯ ವಿವಿಧ ನ್ಯಾಯಲಯಗಳಲ್ಲಿ ಬಾಕಿ ಇದ್ದ ೯೭೭೧೯ ಪ್ರಕರಣಗಳ ಪೈಕಿ  ೧೦೨೦೩ ಪ್ರಕರಣಗಳನ್ನು ಹಾಗೂ ೧೬೬೩೨೮ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು.


    Provided by
    Provided by

    ಲೋಕ್ ಅದಾಲತ್‌ನಲ್ಲಿ  ಜನಸಾಮಾನ್ಯರಿಗೆ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜೀ ಸಂಧಾನದ ಮೂಲಕ ಎಲ್ಲಾ ರೀತಿಯ ರಾಜಿಯಾಗಬಹುದಾದ ವ್ಯಾಜ್ಯ ಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು.  ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಈ ಲೋಕ್ ಅದಾಲತ್‌ನಲ್ಲಿ ಅತೀ ಶೀಘ್ರವಾಗಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

    ನಂತರ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಅವರು, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜಿಯಾಗಬಹುದಾದ ಅಪರಾಧಿಕ ಪ್ರಕರಣ, ಚೆಕ್ಕು ಅಮಾನ್ಯ, ಬ್ಯಾಂಕ್, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕಾರ್ಮಿಕ ವಿವಾದ,  ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬAಧಿಸಿದ ಕ್ಲೇಮು, ವಿದ್ಯುತ್ ಹಾಗೂ ನೀರಿನ ಶುಲ್ಕ, ವೈವಾಹಿಕ / ಕುಟುಂಬ ನ್ಯಾಯಾಲಯ ಪ್ರಕರಣ(ವಿಚ್ಛೇದನ ಪ್ರಕರಣ ಹೊರತುಪಡಿಸಿ)ಗಳು, ಭೂಸ್ವಾಧೀನ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ, ಕಂದಾಯ ಪ್ರಕರಣ (ಜಿಲ್ಲಾ ಹಾಗೂ ಉಚ್ಛ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮಾತ್ರ),  ಸಿವಿಲ್ ಪ್ರಕರಣ(ಬಾಡಿಗೆ, ಅನುಭೋಗದ ಹಕ್ಕುಗಳು ನಿರ್ಬಂಧಕಾಜ್ಞೆ ದಾವೆಗಳು ಹಾಗೂ ಇತರೆ ದಾವೆಗಳು)ಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು.

    ಪ್ರತೀದಿನ ಜಿಲ್ಲೆಯ ಎಲ್ಲಾ ನ್ಯಾಯಲಯಗಳಲ್ಲಿ ಲೋಕ್ ಅದಾಲತ್‌ ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‌ ಗಳು ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿ ಕಚೇರಿ ದೂರವಾಣಿ ಸಂಖ್ಯೆ ೦೮೧೬-೨೨೫೫೧೩೩ ಹಾಗೂ ಮೊ.ಸಂ. ೯೧೪೧೧೯೩೯೫೯ನ್ನು  ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.