nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ

    July 30, 2026
    Facebook Twitter Instagram
    ಟ್ರೆಂಡಿಂಗ್
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    • ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
    • ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
    • ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
    • ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
    • ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
    • ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ:  ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ
    ತುಮಕೂರು May 21, 2025

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    By adminMay 21, 2025No Comments4 Mins Read
    zilla panchayath tumakuru

    ತುಮಕೂರು: ಡಾ.ಡಿ.ಎಂ.ನಂಜುಂಡಪ್ಪ ವರದಿಯ ಶಿಫಾರಸ್ಸಿನಂತೆ ಪ್ರಾದೇಶಿಕ ಅಸಮತೋಲನೆಯನ್ನು ನಿವಾರಿಸಲು ರಾಜ್ಯದಲ್ಲಿ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗಾಗಿ 2007–08 ರಿಂದ 2023–24ರವರೆಗೂ ಸರ್ಕಾರದಿಂದ ಬಿಡುಗಡೆಯಾಗಿರುವ 37,661.65 ಕೋಟಿ ರೂ.ಗಳ ಅನುದಾನದಲ್ಲಿ 34,381.02 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಅಧ್ಯಕ್ಷ ಪ್ರೊ.ಎಂ.ಗೋವಿಂದರಾವ್ ತಿಳಿಸಿದರು.

    ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆ ಸಂಬಂಧ ಸೆಪ್ಟೆಂಬರ್ 2024ರಲ್ಲಿ ಹೊಸ ಸಮಿತಿಯನ್ನು ರಚಿಸಲಾಗಿದೆ. ರಾಜ್ಯದಲ್ಲಿರುವ ಪ್ರಾದೇಶಿಕ ಅಸಮತೋಲನಾ ನಿವಾರಣೆಗಾಗಿ ಈ ಸಮಿತಿಯು ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತಿದೆ ಎಂದು ಹೇಳಿದರು.

    ಸಮಿತಿಯು ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ಡಾ.ನಂಜುಂಡಪ್ಪ ಸಮಿತಿ ಶಿಫಾರಸ್ಸುಗಳ ಆಧಾರದ ಮೇಲೆ ಅಸಮತೋಲನೆ ನಿವಾರಣೆಗೆ ಪರಿಣಾಮಕಾರಿಯಾಗಿ ಕೈಗೊಳ್ಳಲಾದ ಕ್ರಮಗಳ ಮೌಲ್ಯಮಾಪನ ಮಾಡಲಿದೆ ಎಂದು ತಿಳಿಸಿದರು.

    ರಾಜ್ಯದ ಯಾವುದೇ ಸಮುದಾಯ, ಪ್ರದೇಶಗಳು ಅಭಿವೃದ್ಧಿಯಲ್ಲಿ ಹಿಂದುಳಿಯಬಾರದೆAಬುದೇ ಸಮಿತಿ ರಚನೆ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸಮಿತಿಯು ಪ್ರತೀ ಜಿಲ್ಲೆಗೂ ಭೇಟಿ ನೀಡಿ ಸ್ಥಳೀಯ ಸಮಸ್ಯೆಗಳನ್ನು ಕೂಲಂಕುಷವಾಗಿ ಅಧ್ಯಯನ ಮಾಡಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಡಾ.ನಂಜುಂಡಪ್ಪ ಅವರು 2002ರಲ್ಲಿ ಸರ್ಕಾರಕ್ಕೆ ಸಲ್ಲಿಸಿರುವ ಕರ್ನಾಟಕ ಪ್ರಾದೇಶಿಕ ಅಸಮತೋಲನ ವರದಿಯ ಅಭಿವೃದ್ಧಿ ಸೂಚ್ಯಂಕಗಳು ಹಳೆಯದಾಗಿರುವುದರಿಂದ ಹೊಸ ಸೂಚ್ಯಂಕಗಳನ್ನು ಸಿದ್ಧಪಡಿಸಿ ರಾಜ್ಯದ ಜನಪ್ರತಿನಿಧಿಗಳು, ಉನ್ನತ ಅಧಿಕಾರಿಗಳು, ಇತರೆ ಅಧಿಕಾರಿಗಳು, ಸಂಘ–ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು, ಪ್ರಮುಖ ಖಾಸಗಿ ಉದ್ದಿಮೆದಾರರನ್ನು ಭೇಟಿ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು.

    ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ತುಮಕೂರು ಜಿಲ್ಲೆಯು ಆದಾಯ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ 2ನೇ ಸ್ಥಾನದಲ್ಲಿದೆ. ಉಳಿದಂತೆ ಕೃಷಿ, ನೀರಾವರಿ, ಕೈಗಾರಿಕೆ, ಸಾಗಾಣಿಕೆ, ಮತ್ತಿತರ ವಿಷಯಗಳಲ್ಲಿ ಹಿಂದುಳಿದಿದೆ ಎಂದು ತಿಳಿಸಿದರಲ್ಲದೆ ಅಭಿವೃದ್ಧಿ ಸೂಚ್ಯಂಕದನ್ವಯ ಜಿಲ್ಲೆಯ ಚಿಕ್ಕನಾಯಕನಹಳ್ಳಿ ಹಾಗೂ ತುರುವೇಕೆರೆ ತಾಲೂಕುಗಳು ಅತೀ ಹಿಂದುಳಿದಿವೆ. ಹಿಂದುಳಿದ ತಾಲೂಕುಗಳ ಅಭಿವೃದ್ಧಿಗಾಗಿ ಸ್ಥಳೀಯವಾಗಿ ಕಂಡುಬರುವ ಕೊರತೆಗಳನ್ನು ನಿವಾರಿಸಲು ಹಾಗೂ ಹೊಸ ನಿಯಮಗಳನ್ನು ರೂಪಿಸಲು ಸರ್ಕಾರಕ್ಕೆ ಸಮಿತಿ ಶಿಫಾರಸ್ಸು ಮಾಡಿ ವರದಿ ಸಲ್ಲಿಸಲಿದೆ ಎಂದು ತಿಳಿಸಿದರು.

    ಇದಕ್ಕೂ ಮುನ್ನ ನಡೆದ ಅಧಿಕಾರಿಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಭೆಯಲ್ಲಿ ಮಾತನಾಡಿದ ಅವರು ತುಮಕೂರು ಜಿಲ್ಲೆಯು ರಾಜಧಾನಿ ಬೆಂಗಳೂರಿಗೆ ಸಮೀಪ ಇರುವುದರಿಂದ ಅಭಿವೃದ್ಧಿಗೆ ಹಲವಾರು ದಾರಿಗಳಿವೆ. ಸರ್ಕಾರಿ ಅಧಿಕಾರಿಗಳು ಹಾಗೂ ಸಂಘ–ಸಂಸ್ಥೆಗಳ ಸಮನ್ವಯತೆಯಲ್ಲಿ ಪ್ರಾದೇಶಿಕ ಅಭಿವೃದ್ಧಿಗಾಗಿ ಸ್ಥಳೀಯವಾಗಿ ಕೃಷಿ ಕ್ಷೇತ್ರ ವಿಸ್ತರಣೆ, ತಂತ್ರಜ್ಞಾನ ಬಳಕೆ, ನವೋದ್ಯಮಿಗಳಿಗೆ ಮಾರುಕಟ್ಟೆ ಬೆಂಬಲ, ಕೈಗಾರಿಕೆಗಳ ಅಭಿವೃದ್ಧಿ, ಉದ್ದಿಮೆ/ಸ್ಟಾರ್ಟ್-ಅಪ್‌ಗಳಿಗೆ ಸಾಲ ಸೌಲಭ್ಯ, ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮುಂದಾಗಬೇಕು. ಇದರಿಂದ ಯಾವುದೇ ಪ್ರದೇಶ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ತಿಳಿಸಿದರು.

    ಪ್ರಸ್ತುತ ರಾಜ್ಯದ 240 ತಾಲೂಕುಗಳಲ್ಲಿ ಆದಾಯ, ಶಿಕ್ಷಣ ಮತ್ತು ಆರೋಗ್ಯ ಸಂಬಂಧ ಪ್ರಮುಖ ಸೂಚ್ಯಂಕಗಳನ್ನು ಆಧಾರವನ್ನಾಗಿಸಿಕೊಂಡು ಜಿಲ್ಲಾ ಮಟ್ಟದಲ್ಲಿ ಸಮಗ್ರ ಅಧ್ಯಯನ ಮಾಡಲಾಗುವುದು. ಬರುವ ಅಕ್ಟೋಬರ್ ಮಾಹೆಯೊಳಗೆ ಪ್ರತಿ ಜಿಲ್ಲೆಯ ಪರಿಸ್ಥಿತಿಗಳ ಅಧ್ಯಯನ ಮಾಡಿ ಸ್ಥಳೀಯ ಸಮಸ್ಯೆಗಳ್ನು ಬಗೆಹರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಿತಿಯು ಸಂಪೂರ್ಣ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ ಎಂದು ತಿಳಿಸಿದರು.

    ರಾಜ್ಯದಲ್ಲಿ ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹೊರತುಪಡಿಸಿದರೆ ಉಳಿದ ಜಿಲ್ಲೆಗಳು ಬೆಳವಣಿಗೆಯ ಪಥದಲ್ಲಿಲ್ಲ. ಹಾಗಾಗಿ ಹೊಸ ಸಮಿತಿಯ ವರದಿಯು ಅಭಿವೃದ್ಧಿ ನೀತಿಗೆ ದಾರಿ ತೋರಿಸಲಿದೆ ಎಂಬ ನಿರೀಕ್ಷೆಯಿದೆ ಎಂದು ತಿಳಿಸಿದರು.

    ಶಾಸಕ ಸುರೇಶಗೌಡ ಮಾತನಾಡಿ ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಸಂಖ್ಯೆ ಶೂನ್ಯದಲ್ಲಿದೆ. ಖಾಲಿಯಿರುವ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳುವ ಬಗ್ಗೆ ವರದಿಯಲ್ಲಿ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಮನವಿ ಮಾಡಿದರು.

    ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ ಜಿಲ್ಲೆಯ ಜನಸಂಖ್ಯೆ, ಭೌಗೋಳಿಕ ವಿಸ್ತೀರ್ಣ, ಸಾಕ್ಷರತೆ ಪ್ರಮಾಣ ಸೇರಿ ಸಾಮಾನ್ಯ ಮಾಹಿತಿಯನ್ನು ಸಭೆಗೆ ತಿಳಿಸುತ್ತಾ ಒಟ್ಟು ದೇಶೀಯ ಉತ್ಪನ್ನದಲ್ಲಿ ಜಿಲ್ಲೆಯು ರಾಜ್ಯದ 4ನೇ ಸ್ಥಾನದಲ್ಲಿದೆ. ಡಾ: ಡಿ.ಎಂ. ನಂಜುಂಡಪ್ಪ ವರದಿಯ ಶಿಫಾರಸ್ಸಿನಂತೆ ಜಿಲ್ಲೆಗೆ ಕುಣಿಗಲ್, ಮಧುಗಿರಿ, ಗುಬ್ಬಿ, ಶಿರಾ, ಪಾವಗಡ ತಾಲೂಕುಗಳನ್ನು ಅತ್ಯಂತ ಹಿಂದುಳಿದ ಹಾಗೂ ಪಾವಗಡ, ತುರುವೇಕೆರೆ, ಕೊರಟಗೆರೆ, ಚಿಕ್ಕನಾಯಕನಹಳ್ಳಿ ತಾಲೂಕುಗಳನ್ನು ಅತೀ ಹಿಂದುಳಿದ ತಾಲೂಕುಗಳೆಂದು ಗುರುತಿಸಲಾಗಿದೆ. ಹಿಂದುಳಿದ ತಾಲೂಕುಗಳ ಅಭಿವೃದ್ಧಿಗಾಗಿ 2007–08 ರಿಂದ 2023-24ರವರೆಗೆ ಒಟ್ಟು 1955.39 ಕೋಟಿ ರೂ.ಗಳು ಬಿಡುಗಡೆಯಾಗಿದೆ. ಇದರಲ್ಲಿ ಶಿಕ್ಷಣ, ಆರೋಗ್ಯ, ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ, ಕುಡಿಯುವ ನೀರಿನ ಯೋಜನೆ ಸೇರಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 1749.2 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ನದಿ ಮೂಲ ಇಲ್ಲದಿರುವುದರಿಂದ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗಾಗಿ ಹೇಮಾವತಿ, ಎತ್ತಿನಹೊಳೆ, ಭದ್ರಾ ಮೇಲ್ದಂಡೆ ಬೃಹತ್ ಕುಡಿಯುವ ನೀರಾವರಿ ಯೋಜನೆಗಳನ್ನು ಕೈಗೊಂಡಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರಲ್ಲದೆ ಸಿರಿಧಾನ್ಯದ ರಾಜಧಾನಿಯಾಗಿರುವ ತುಮಕೂರು ಜಿಲ್ಲೆಯಲ್ಲಿ ಸಿರಿಧಾನ್ಯಗಳ ಮೌಲ್ಯವರ್ಧನೆಗೆ ಅವಕಾಶ ದೊರೆತಲ್ಲಿ ಬೇರೆ ದೇಶಗಳಿಗೆ ಸಿರಿಧಾನ್ಯಗಳ ರಫ್ತು ಮಾಡುವಷ್ಟು ಜಿಲ್ಲೆ ಬೆಳೆಯಲಿದೆ. ಸಿರಿಧಾನ್ಯಗಳ ಮೌಲ್ಯವರ್ಧನೆಗೆ ವರದಿಯಲ್ಲಿ ಶಿಫಾರಸ್ಸು ಮಾಡಬೇಕು ಎಂದು ಮನವಿ ಮಾಡಿದರು.

    ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಲಿಂಗರಾಜು ಮಾತನಾಡಿ, ನಮ್ಮಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಕೈಗಾರಿಕೆಗಳಿವೆ. ಆದರೆ ಮಾನವ ಸಂಪನ್ಮೂಲಗಳಿಲ್ಲದೆ ಕೆಲವು ಕೈಗಾರಿಕೆಗಳು ಸೊರಗುತ್ತಿವೆ. ಈ ನಿಟ್ಟಿನಲ್ಲಿ ಯುವ ಜನಾಂಗಕ್ಕೆ ಸೂಕ್ತ ಕೌಶಲ್ಯ ತರಬೇತಿ ನೀಡುವ ವ್ಯವಸ್ಥೆಯಾದಲ್ಲಿ ಜಿಲ್ಲೆಯ ನಿರುದ್ಯೋಗ ಸಮಸ್ಯೆ ನಿವಾರಣೆಯಾಗುತ್ತದೆ ಎಂದು ಸಮಿತಿಯ ಗಮನಕ್ಕೆ ತಂದರು.

    ಮಧುಗಿರಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಿರಿಜಾ ಮಾತನಾಡಿ ಪಾರದರ್ಶಕವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿದ್ದರಿಂದ ನೈಜ ಫಲಿತಾಂಶ ಬಂದಿದೆ. ಫಲಿತಾಂಶವನ್ನು ಉತ್ತಮವಾಗಿಸಲು ಶಿಕ್ಷಣ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಶಿಕ್ಷಕರಿಗೆ ಬಲಸಂವರ್ಧನಾ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಶ್ರಮಿಸಲಾಗುವುದು ಎಂದು ಮಾಹಿತಿ ನೀಡಿದರು.

    ಜಿಲ್ಲೆಯ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಡಿಹೆಚ್‌ ಓ ಡಾ.ಚಂದ್ರಶೇಖರ್; ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪಾಂಡುರಂಗ ಕುರಂದವಾಡ್, ಮೂಲಭೂತ ಸೌಕರ್ಯ ಸಮಿತಿ ನಿರ್ದೇಶಕ ಜಿ.ಆರ್. ಸುರೇಶ್, ತುಮಕೂರು ವೇಸ್ಟ್ ಮ್ಯಾನೇಜ್‌ಮೆಂಟ್ ಅಧ್ಯಕ್ಷ ಮೊಹಮ್ಮದ್ ವಾಜಿದ್ ಅವರು ಮಾತನಾಡಿ ಕ್ರಮವಾಗಿ ಕೈಗಾರಿಕಾಭಿವೃದ್ಧಿ, ಮೂಲಭೂತ ಸೌಕರ್ಯಾಭಿವೃದ್ಧಿ, ತ್ಯಾಜ್ಯ ವಿಲೇವಾರಿಗಾಗಿ ಕೈಗೊಳ್ಳಬೇಕಾದ ಯೋಜನೆಗಳ ಬಗ್ಗೆ ಸಲಹೆ ನೀಡಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ

    July 30, 2026

    ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಸರಗೂರು / ಎಚ್.ಡಿ. ಕೋಟೆ:  ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಅತಿ ದೊಡ್ಡ ಶಾಪವಾಗಿದ್ದು, ಇದರ ವಿರುದ್ಧ ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಬೇಕು.…

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ

    July 30, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.