ತುಮಕೂರು: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು, ಮುಖ್ಯೋಪಾಧ್ಯಾಯರು, ಸರ್ಕಾರಿ ಪ್ರೌಢಶಾಲಾ ಶಿಕ್ಷಕರು/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು/ ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಾಗಿ ಆಸಕ್ತ ಶಿಕ್ಷಕರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 21ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ.
ಅರ್ಜಿಯನ್ನು ಇ.ಇ.ಡಿ.ಎಸ್. ಮೂಲಕ ಆನ್ ಲೈನ್ ನಲ್ಲಿ ಸಲ್ಲಿಸಬೇಕು. ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಮಸ್ಯೆ/ಆಕ್ಷೇಪಣೆ/ ಸಂದೇಹಗಳಿದ್ದಲ್ಲಿ ಜಿಲ್ಲಾ ಹಂತದ ವರ್ಗಾವಣೆ ಕೋಶದ ಮೂಲಕವೇ ಬಗೆಹರಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮನಮೋಹನ್ ಹೆಚ್.ಕೆ.(ಮೊ.ಸಂ.9448999352), ಪತ್ರಾಂಕಿತ ಸಹಾಯಕ ವಸಂತಕುಮಾರ್ ಡಿ.(6363560430) ಹಾಗೂ ಅಧೀಕ್ಷಕ ಯೋಗಾನಂದ(9886479184) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW