ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಫೋನ್ ಪೇ, ತುಮಕೂರು ಹಾಗೂ ಬೆಂಗಳೂರಿನ ಇಲಿಯಡ್ ಆಕ್ಸಿಲರಿ ಸರ್ವಿಸಸ್ ಪ್ರೈ. ಸಂಸ್ಥೆಯ ಸಹಭಾಗಿತ್ವದಲ್ಲಿ ಬ್ಯುಸಿನೆಸ್ ಡೆವಲಪ್ ಎಕ್ಸಿಕ್ಯೂಟಿವ್ ಹಾಗೂ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಸೆಪ್ಟೆಂಬರ್ 24ರಂದು ನೇರ ಸಂದರ್ಶನ ನಡೆಯಲಿದೆ.
ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 24ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿ.ಡಿ.ಪಿ.ಐ ಬಸ್ ನಿಲ್ದಾಣ, ವಾಸನ್ ಕಣ್ಣಿನ ಆಸ್ಪತ್ರೆ ಹತ್ತಿರ, ಮೂಲೆಮನೆ ಹೋಟೆಲ್ ಪಕ್ಕ, ಸೋಮೇಶ್ವರಪುರಂ, 14ನೇ ಕ್ರಾಸ್, ತುಮಕೂರು–572102 ಇಲ್ಲಿ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2278488, ಮೊ.ಸಂ. 8792669410, 7760174554ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
