ತುಮಕೂರು: ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರಿನ ಅಂತರಸನಹಳ್ಳಿ ಸಮೀಪದ ಮಾರುಕಟ್ಟೆ ಶೌಚಾಲಯದಲ್ಲಿ ನಡೆದಿದೆ.
ಬಿಹಾರ ಮೂಲದ ಯುವಕ ಲಖನ್ ಮಾನ್ಸಿ ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದ್ದು, ಈತ ಕಳೆದ 6 ತಿಂಗಳುಗಳಿಂದ ಮಾರುಕಟ್ಟೆ ಶೌಚಾಲಯವನ್ನು ಶುಚಿಗೊಳಿಸುವ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಶೌಚಾಲಯದಲ್ಲಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ತುಮಕೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA