ತುಮಕೂರು: ಕುಣಿಗಲ್ ತಾಲ್ಲೂಕಿನ ಮಾರ್ಕೋನಹಳ್ಳಿ ಜಲಾಶಯದ ಹಿನ್ನೀರಿನಲ್ಲಿ ಮಂಗಳವಾರ 6 ಜನ ಕೊಚ್ಚಿಕೊಂಡು ಹೋಗಿದ್ದು, ಇಬ್ಬರ ಮೃತದೇಹ ಪತ್ತೆಯಾಗಿದೆ. ಉಳಿದವರಿಗೆ ಹುಡುಕಾಟ ನಡೆದಿದೆ.
ಜಲಾಶಯದ ಹಿನ್ನೀರಿನ ಕಾಲುವೆಗೆ ಇಳಿದಿದ್ದು, ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಒಟ್ಟು ಏಳು ಮಂದಿಯಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಒಬ್ಬರನ್ನು ರಕ್ಷಿಸಲಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.
ಮೃತರು ತುಮಕೂರು ನಗರದ ಬಿ.ಜೆ.ಪಾಳ್ಯದ ನಿವಾಸಿಗಳು. ಕುಣಿಗಲ್ ತಾಲ್ಲೂಕಿನ ಮಾಗಡಿಪಾಳ್ಯ ಗ್ರಾಮದ ಸಂಬಂಧಿಕರ ಮನೆಗೆ ಹೋಗಿದ್ದರು. ಊಟ ಮುಗಿಸಿಕೊಂಡು ಜಲಾಶಯಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ. ಮೃತರ ವಿವರ ಇನ್ನೂ ಲಭ್ಯವಾಗಿಲ್ಲ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC