ತುಮಕೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಒಬ್ಬ ಕುಸಿದು ಬಿದ್ದು ಮೃತಪಟ್ಟಿದ್ದಾನೆ, ಅಲ್ಲದೇ ಮತ್ತೊಂದು ಪರೀಕ್ಷೆ ಕೇಂದ್ರದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಅಸ್ವಸ್ಥಗೊಂಡಿರುವ ಘಟನೆ ತುರುವೇಕೆರೆ ಪಟ್ಟಣದಲ್ಲಿ ಇರುವ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.
ಮೋಹನ್ ಕುಮಾರ್ 16 ಮೃತ ವಿದ್ಯಾರ್ಥಿಯಾಗಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ರೋಹಿತ್ ಎಂಬಾತ ಅಸ್ವಸ್ಥಗೊಂಡಿದ್ದಾನೆ.
ಚಿಕ್ಕನಾಯಕನಹಳ್ಳಿ ತಾಲೂಕಿನ ಚಿಕ್ಕರಾಪುರ ನಿವಾಸಿ ಮೋಹನ್ ಕುಮಾರ್ ತುರುವೇಕೆರೆ ತಾಲೂಕಿನ ಲೋಕಮ್ಮನಹಳ್ಳಿ ಗೇಟ್ ಕಂಚಿರಾಯ ನಿವಾಸ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
ಸೋಮವಾರ ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯ ಸರಸ್ವತಿ ಬಾಲಿಕಾ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುವೆ ವೇಳೆ ಅಶ್ವಸ್ಥಗೊಂಡಿದ್ದ. ತಕ್ಷಣವೇ ತುರುವೇಕೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಆಂಬುಲೆನ್ಸ್ ನಲ್ಲಿಯೇ ಮೃತಪಟ್ಟಿದ್ದಾನೆ.
ಮೋಹನ್ ಕುಮಾರ್ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎಂದು ತಿಳಿದು ಬಂದಿದೆ. ಪರೀಕ್ಷೆಗೆ ಸುಮಾರು ಒಂದು ಗಂಟೆಗಳವರೆಗೆ ಉತ್ತರ ಪತ್ರಿಕೆ ಬರೆದಿದ್ದ. ನಂತರ ಅಸ್ವಸ್ಥಗೊಂಡ ಆತನನ್ನು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸುವ ಮಾರ್ಗಮತ್ತೆ ಮೃತಪಟ್ಟಿದ್ದಾನೆ ಎಂದು ತುರುವೇಕೆರೆ ಬಿಇಒ ಸೋಮಶೇಖರ್ ತಿಳಿಸಿದ್ದಾರೆ
ಮತ್ತೊಂದು ಘಟನೆಯಲ್ಲಿ, ರೋಹಿತ್ ಎಂಬ ವಿದ್ಯಾರ್ಥಿ ತುರುವೇಕೆರೆ ಹುಲ್ಲಿಕೆರೆಯ ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ದಿಢೀರ್ ಅಸ್ವಸ್ಥಗೊಂಡಿದ್ದು, ಹೀಗಾಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ವಾಪಸ್ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296