nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ

    July 28, 2026

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    • ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
    • ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
    • ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು | ಅಂಬೇಡ್ಕರ್ ಯುವ ಸೇನೆಯಿಂದ 208ನೇ ಭೀಮ-ಕೋರೆಗಾಂವ್ ವಿಜಯ ದಿನಾಚರಣೆ
    ತುಮಕೂರು January 2, 2026

    ತುಮಕೂರು | ಅಂಬೇಡ್ಕರ್ ಯುವ ಸೇನೆಯಿಂದ 208ನೇ ಭೀಮ-ಕೋರೆಗಾಂವ್ ವಿಜಯ ದಿನಾಚರಣೆ

    By adminJanuary 2, 2026No Comments2 Mins Read
    koregaon tumakur

    ತುಮಕೂರು: ನಗರದ ಟೌನ್‌ಹಾಲ್ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಇಂದು ಅಂಬೇಡ್ಕರ್ ಯುವ ಸೇನೆ ವತಿಯಿಂದ 208ನೇ ಭೀಮ–ಕೋರೆಗಾಂವ್ ವಿಜಯೋತ್ಸವವನ್ನು ಆಚರಿಸಲಾಯಿತು.

    ತಮ್ಮನ್ನು ಅವಮಾನ ಮಾಡಿ, ಸಮಾನತೆಯನ್ನು ನಿರಾಕರಿಸಿದ ಮರಾಠರ ಎರಡನೇ ಬಾಜೀರಾಯನ 28 ಸಾವಿರ ಮರಾಠ ಸೈನಿಕರ ವಿರುದ್ಧ ಐದು ನೂರು ಜನ ಮಹರ್ ಸೈನಿಕರು, ಸ್ವಾಭಿಮಾನಕ್ಕಾಗಿ ಭೀಮಾ ನದಿ ತೀರದ ಕೋರೆಗಾಂವ್ ಬಳಿ ನಡೆಸಿದ ಯುದ್ಧದ 208ನೇ ವಿಜಯೋತ್ಸವದ ಅಂಗವಾಗಿ ಭೀಮಕೋರೆಗಾಂವ್ ಯುದ್ಧಸ್ಮಾರಕದ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಗೌರವ ಸೂಚಿಸುವ ಮೂಲಕ ಯುದ್ಧದಲ್ಲಿ ಮಡಿದ ಮಹರ್ ಸೈನ್ಯದ 22 ಜನರನ್ನು ಸ್ಮರಿಸಲಾಯಿತು.

    ಈ ವೇಳೆ ಮಾತನಾಡಿದ ಅಂಬೇಡ್ಕರ್ ಯುವ ಸೇನೆಯ ಜಿಲ್ಲಾಧ್ಯಕ್ಷ ಗಣೇಶ್.ಜಿ., ಭೀಮ ಕೋರೆಗಾಂವ್ ವಿಜಯೋತ್ಸವ ದೇಶದ ದಲಿತರಿಗೆ ಸ್ವಾಭಿಮಾನದ ಸಂಕೇತವಾಗಿದೆ. ದಲಿತರ ಸ್ವಾಭಿಮಾನಕ್ಕೆ, ಆತ್ಮ ಗೌರವಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ ಎಂಬುದಕ್ಕೆ ಈ ಯುದ್ಧ ಸಾಕ್ಷಿಯಾಗಿದೆ. ಲಂಡನ್‌ನ ಕೊಲಂಬಿಯಾ ವಿವಿಯಲ್ಲಿ ಅಂಬೇಡ್ಕರ್ ಕಲಿಯುವ ವೇಳೆ ಅಲ್ಲಿನ ಲೈಬ್ರರಿಯಲ್ಲಿ ದೊರೆತ ಪುಸ್ತಕದಿಂದ ಎರಡನೇ ಬಾಜೀರಾಯನ ಸೈನ್ಯದ ವಿರುದ್ಧ ದಲಿತರು ನಡೆಸಿದ ಸ್ವಾಭಿಮಾನಿ ಯುದ್ಧವನ್ನು ಅರಿತು, ಯುದ್ಧದಲ್ಲಿ ಮಡಿದ ಮಹರ್ ಸೈನಿಕರಿಗಾಗಿ ಬ್ರಿಟಿಷ್ ಅಧಿಕಾರಿಗಳು ನಿರ್ಮಿಸಿದ ಸ್ಮಾರಕವನ್ನು ಪತ್ತೆ ಹಚ್ಚುವ ಮೂಲಕ ಇತಿಹಾಸದಲ್ಲಿ ಮುಚ್ಚಿ ಹೋಗಿದ್ದ ಮಹಾನ್ ಘಟನೆಯನ್ನು ಜಗತ್ತಿಗೆ ಪರಿಚಯಿಸಿದರು. ಬಾಬಾ ಸಾಹೇಬರು ತಾವು ಬದುಕಿದ್ದಷ್ಟು ವರ್ಷ ಜಗತ್ತಿನ ಯಾವ ಮೂಲೆಯಲ್ಲಿದ್ದರೂ ಜನವರಿ 01 ರಂದು ಭೀಮ-ಕೋರೆಗಾಂವ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ, ಮಡಿದ ಯೋಧರಿಗೆ ನಮನ ಸಲ್ಲಿಸುವ ಕೆಲಸ ಮಾಡುತ್ತಿದ್ದರು. ಅದೇ ರೀತಿಯಲ್ಲಿ ನಾವುಗಳ ಸಹ ಪ್ರತಿವರ್ಷ ಜನವರಿ 01 ರಂದು ಮಡಿದ ಯೋಧರನ್ನು ಸ್ಮರಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

    ಮುಖಂಡರಾದ ಸೌಭಾಗ್ಯಮ್ಮ ಮಾತನಾಡಿ, ಇತಿಹಾಸದ ಪುಟಗಳಲ್ಲಿ ಮುಚ್ಚಿ ಹೋಗಿದ್ದ ಭೀಮ-ಕೋರೆಗಾಂವ್ ಹೋರಾಟವನ್ನು ತಮ್ಮ ಅಧ್ಯಯನ ಮೂಲಕ ಹೊರತಂದು ದಲಿತರು ಸಹ ವೀರರೇ, ಅವರ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ ಎಂಬುದಕ್ಕೆ 500 ಜನ ಮಹರ್ ಸೈನಿಕರು 28 ಸಾವಿರ ಮರಾಠರ ಪೇಶ್ವೆ ಸೈನಿಕರನ್ನು ಸದೆಬಡಿದ ಈ ಯುದ್ಧವೇ ಸಾಕ್ಷಿ. ಇದು ನಮ್ಮೆಲ್ಲರ ಸ್ವಾಭಿಮಾನವನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದರು.

    ಡಿಎಸ್‌ಎಸ್ ಮುಖಂಡ ಪಿ.ಎನ್.ರಾಮಯ್ಯ ಮಾತನಾಡಿ, ಭೀಮ–ಕೋರೆಗಾಂವ್ ಯುದ್ಧ ದಲಿತರ ಸ್ವಾಭಿಮಾನದ ಸಂಕೇತ. ಇದನ್ನು ಜಗತ್ತಿನ ಮುಂದೆ ಸಾಕ್ಷ್ಯಾಧಾರಗಳ ಮೂಲಕ ತೆರೆದಿಡುವ ಮೂಲಕ ಬಾಬಾ ಸಾಹೇಬರು, ದಲಿತರಿಗೆ ಒಂದು ಎದೆಗಾರಿಕೆಯನ್ನು ಮೂಡಿಸಿದ್ದಾರೆ ಎಂದರು.

    ದಲಿತ ಮುಖಂಡರಾದ ದಾಸಪ್ಪ ಮಾತನಾಡಿದರು. ಈ ವೇಳೆ ಮುಖಂಡರಾದ ಆಟೋ ಶಿವರಾಜು, ಡಿ. ಕೆ.ಇಂದ್ರಕುಮಾರ್, ಪಾಲಿಕೆ ಮಾಜಿ ಸದಸ್ಯ ನಯಾಜ್, ನರಸಿಂಹಮೂರ್ತಿ, ದೊಡ್ಡಯ್ಯ, ದಾಸಪ್ಪ, ಲಕ್ಷ್ಮಿಕಾಂತ್, ಮಾರುತಿ, ಪಾಲಿಕೆ ನೌಕರರ ಸಂಘದ ಗೌರವಾಧ್ಯಕ್ಷ ಅಂಜನಪ್ಪ, ಸೌಭಾಗ್ಯ, ಕಿರಣ್, ಲೋಕೇಶ್, ಶೆಟ್ಟಾಳಯ್ಯ, ಮಂಜುನಾಥ್, ಹಾಲೇಶ್ ಮತ್ತಿತರರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ

    July 28, 2026

    ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್ ತಾಲೂಕು ಘಟಕದ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಗೌರವಾನ್ವಿತ ‘ಕನ್ನಡ ಜಂಗಮ’ ಪ್ರಶಸ್ತಿಗೆ…

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.