ತುಮಕೂರು: ತುಮಕೂರು ನಗರದ ಹನುಮಂತಪುರದ ಬಳಿ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಆ್ಯಂಬುಲೆನ್ಸ್ ವೊಂದು ಪರದಾಡಿದ ಘಟನೆ ನಡೆದಿದೆ.
ಸುಮಾರು 15 ನಿಮಿಷಕ್ಕೂ ಹೆಚ್ಚು ಸಮಯ ಆ್ಯಂಬುಲೆನ್ಸ್ ಟ್ರಾಫಿಕ್ ನಲ್ಲಿ ಸಿಲುಕಿದೆ. ಹನುಮಂತದ ಬ್ರಿಡ್ಜ್ ಬಳಿ ನಾಲ್ಕು ಕಡೆಯಿಂದ ಬರುವ ವಾಹನಗಳಿಂದ ಉಂಟಾದ ಟ್ರಾಫಿಕ್ ಜಾಮ್ ನಡುವೆ ಆ್ಯಂಬುಲೆನ್ಸ್ ಸಿಲುಕಿತು.
ಸುಮಾರು ಅರ್ಧ ಕಿ.ಮೀ. ದೂರದವರೆಗೂ ಟ್ರಾಫಿಕ್ ಜಾಮ್ ಉಂಟಾಗಿತ್ತು. ರಾಷ್ಟ್ರೀಯ ಹೆದ್ದಾರಿ ಶಿರಾ ಭಾಗದಿಂದ ತುಮಕೂರು ನಗರದ ಕಡೆಗೆ ಆ್ಯಂಬುಲೆನ್ಸ್ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಟ್ರಾಫಿಕ್ ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವಹಿಸಿದ ಹಿನ್ನೆಲೆ ಈ ಘಟನೆ ನಡೆದಿದೆ. ಟ್ರಾಫಿಕ್ ಸಮಸ್ಯೆ ಉಂಟಾಗುವ ಸ್ಥಳದಲ್ಲಿ ಸಿಬ್ಬಂದಿ ನಿಯೋಜನೆಯಾಗದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ.
ಹನುಮಂತಪುರದ ಬಳಿ ಬೆಳಗಿನ ಸಮಯ ನಿತ್ಯ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಬೆಳಿಗ್ಗಿನ ಸಮಯದಲ್ಲಿ ಪೊಲೀಸ್ ಸಿಬ್ಬಂದಿ ಇಲ್ಲದೆ ನಿತ್ಯ ಟ್ರಾಫಿಕ್ ಜಾಮ್ ಹೆಚ್ಚುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q