ತುಮಕೂರು: ತುಮಕೂರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೆಟ್ರಿಕ್ ನಂತರ(ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಪ್ರವರ್ಗ–1, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 2.50 ಲಕ್ಷ ರೂ. ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿಗಳಿಗೆ ಸೇರಿದ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 1 ಲಕ್ಷ ರೂ.ಗಳ ಮಿತಿಯೊಳಿರಬೇಕು. ಅರ್ಹ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಸೆಪ್ಟೆಂಬರ್ 30ರೊಳಗೆ ಜಾಲತಾಣ: https://shp.karnataka.gov.in/bcwd ಮೂಲಕ ಸಲ್ಲಿಸಬಹುದಾಗಿದೆ.
ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಾಲತಾಣ: https://bcwd.karnataka.gov.in/ ಅನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ವಿ-ಅಂಚೆ: bcwd-helpline@gmail.com ಮೂಲಕ ಅಥವಾ ಜಿಲ್ಲಾ/ ತಾಲೂಕು ಮಟ್ಟದ ಇಲಾಖಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ವಾ.ಸಂ.0816-2278014 ಅಥವಾ ಸಹಾಯವಾಣಿ ಸಂಖ್ಯೆ: 8050770004ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸೋನಿಯಾ ವರ್ಣೇಕರ್ ತಿಳಿಸಿದ್ದಾರೆ.
ಇದನ್ನೂ ಓದಿ: ತುಮಕೂರು: ಗೊಲನ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
