ತುಮಕೂರು: ಕೃಷಿ ಇಲಾಖೆಯು ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಲು ರೈತರಿಂದ ಅರ್ಜಿ ಆಹ್ವಾನಿಸಿದೆ.
ಸಮಗ್ರ ಕೃಷಿ ಪದ್ಧತಿ, ಮಣ್ಣು ಹಾಗೂ ನೀರಿನ ಸಂರಕ್ಷಣೆ, ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡಿರುವ ರೈತರು ಹಾಗೂ ರೈತ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ ರೈತರು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 1 ರಿಂದ 15ರೊಳಗೆ ಸಲ್ಲಿಸಬಹುದು. ಅರ್ಹತೆ ಹಾಗೂ ಹೆಚ್ಚಿನ ಮಾಹಿತಿಯನ್ನು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಆಯಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
