ತುಮಕೂರು: ಪಾವಗಡ ತಾಲ್ಲೂಕು ಕೃಷಿ ಇಲಾಖೆ ವತಿಯಿಂದ ಕೃಷಿ ಪಂಡಿತ, ಕೃಷಿ ಪ್ರಶಸ್ತಿ(ಬೆಳೆ ಸ್ಪರ್ಧೆ) ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತ ಮತ್ತು ರೈತ ಮಹಿಳೆಯರು ಕೃಷಿ ಪಂಡಿತ ಮತ್ತು ಕೃಷಿ ಪ್ರಶಸ್ತಿ(ಬೆಳೆ ಸ್ಪರ್ಧೆ)ಗೆ k-kisan portal®Üw RSK login ಅಥವಾ citizen login ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ/ನಾಗರಿಕ ಸೇವಾ ಕೇಂದ್ರದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ರೈತರ FID(FRUITS ID) ಸಂಖ್ಯೆಯನ್ನು ಬಳಸಿಕೊಂಡು ಆನ್ ಲೈನ್ ಮೂಲಕ ಆಗಸ್ಟ್ 31ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಸಂಬಂಧಪಟ್ಟ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪಡೆದು ಸಲ್ಲಿಸಬಹುದಾಗಿದೆ ಎಂದು ಪಾವಗಡ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
