ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಜಗನ್ನಾಥಪುರ ಬಳಿಯ ಸೇತುವೆ ಮೇಲೆ ನಡೆದಿದೆ.
ಮೃತರನ್ನು ಶಿವರಾಜು (59) ಎಂದು ಗುರುತಿಸಲಾಗಿದೆ. ಏಪ್ರಿಲ್ 26ರಂದು ರಾತ್ರಿ ಸುಮಾರು 10 ಗಂಟೆಯ ಸಮಯದಲ್ಲಿ ಶಿವರಾಜು ಅವರು ರಸ್ತೆ ದಾಟುತ್ತಿದ್ದರು. ಈ ವೇಳೆ ಅಂತರಸನಹಳ್ಳಿಯಿಂದ ಬೆಂಗಳೂರು ಕಡೆಗೆ ಅತೀ ವೇಗವಾಗಿ ಬಂದ ಕಾರೊಂದು ಅವರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.
ಅಪಘಾತದಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ಶಿವರಾಜು ಅವರನ್ನು ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗಾಯದ ತೀವ್ರತೆ ಹೆಚ್ಚಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಏಪ್ರಿಲ್ 27ರಂದು ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ.
ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕ ಬೆಂಗಳೂರು ಮೂಲದ ರಾಘವೇಂದ್ರ ಎಂದು ತಿಳಿದುಬಂದಿದೆ. ಮೃತರ ಪುತ್ರ ಪ್ರಕಾಶ್ ಅವರು ನೀಡಿದ ದೂರಿನ ಮೇರೆಗೆ ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


