ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 2ರಂದು ಆಯೋಜಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ / ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖಾ ಯೋಜನೆಗಳ ಫಲಾನುಭವಿಗಳ ಸವಲತ್ತು ವಿತರಣಾ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.
ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ.ಸೋಮಣ್ಣ, ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ, ಇಂಧನ ಸಚಿವ ಕೆ.ಜೆ.ಜಾರ್ಜ್, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್, ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ. ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್. ತಂಗಡಗಿ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಸುರೇಶ್ ಬಿ.ಎಸ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್, ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಚಿವ ಮಂಕಾಳ ಎಸ್. ವೈದ್ಯ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx