nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಮಕ್ಕಳ ನಾಯಕತ್ವ ತರಬೇತಿ ಶಿಬಿರ
    ತುಮಕೂರು December 17, 2024

    ತುಮಕೂರು: ಮಕ್ಕಳ ನಾಯಕತ್ವ ತರಬೇತಿ ಶಿಬಿರ

    By adminDecember 17, 2024No Comments1 Min Read
    bharath sevadal

    ತುಮಕೂರು: ಭಾರತ ಸೇವಾದಳ ಜಿಲ್ಲಾ ಹಾಗೂ ತಾಲ್ಲೂಕು ಸಮಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ತುಮಕೂರು ವತಿಯಿಂದ ತಾಲ್ಲೂಕು ಮಟ್ಟದ ಮಕ್ಕಳ ನಾಯಕತ್ವ ತರಬೇತಿ ಶಿಬಿರವನ್ನು ಗುಬ್ಬಿಯ  ಸರ್ಕಾರಿ ಬಾಲಕಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆಸಲಾಯಿತು.

    ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್. ನಟರಾಜು ಅವರು ಗಿಡಕ್ಕೆ ನೀರು ಹಾಕುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳು ಶಾಲೆಯಲ್ಲಿ ನಾಯಕ–ನಾಯಕಿಯರಾಗಿ ನಡೆಯಲು ಸೇವಾದಳದ ನಾಯಕತ್ವ ಶಿಬಿರದ ಚಟುವಟಿಕೆಗಳು ವಿದ್ಯಾರ್ಥಿಗಳ ಕಲಿಕಾ ಹಂತ ಹಾಗೂ ತಮ್ಮೆಲ್ಲರ ಮುಂದಿನ ಜೀವನಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.


    Provided by
    Provided by

    ಅಧ್ಯಕ್ಷತೆ ವಹಿಸಿದ್ದ ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಬಿ.ಜಿ. ವೆಂಕಟೇಗೌಡ ಮಾತನಾಡಿ, ಮಕ್ಕಳಲ್ಲಿ ಸೇವಾ ಮನೋಭಾವನೆಯೊಂದಿಗೆ ಮಾನವೀಯ ಮೌಲ್ಯಗಳು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

    ಗುಬ್ಬಿ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸಿ. ರಮೇಶ್ ಮಕ್ಕಳನ್ನು ಕುರಿತು ಮಾತನಾಡಿ, ಗುರು ಹಿರಿಯರನ್ನು, ರಾಷ್ಟ್ರಧ್ವಜ, ರಾಷ್ಟ್ರಗೀತೆಗಳನ್ನು ಗೌರವಿಸಬೇಕು.  ದೇಶ ಪ್ರೇಮವನ್ನು ಬೆಳೆಸಿಕೊಳ್ಳುವುದರಿಂದ ದೇಶದ ನಾಗರಿಕನಾಗಲು ಸಾಧ್ಯ ಎಂದರು.

    ಜಿಲ್ಲಾ ಉಪಾಧ್ಯಕ್ಷರಾದ ಜಿ. ವೆಂಕಟೇಶ್ ಮಾತನಾಡಿ, ಸೇವಾದಳದ ಚಟುವಟಿಕೆಗಳಿಂದ ಜೀವನದಲ್ಲಿ ಶಿಸ್ತು, ಸಂಯಮ, ದೇಶಭಕ್ತಿ ಹಾಗೂ ಸೇವೆಯಂತಹ ಗುಣಗಳು ಸೇವಾದಳದ ಶಿಕ್ಷಣದಲ್ಲಿ ಮಾತ್ರ ಸಿಗಲು ಸಾಧ್ಯ ಎಂದರು.

    ಜಿಲ್ಲಾ ಕಾರ್ಯದರ್ಶಿ ಹೆಚ್. ಎಸ್. ಕೃಷ್ಣಮೂರ್ತಿ ಮಾತನಾಡಿ, ಮಕ್ಕಳ ನಾಯಕತ್ವ ಶಿಬಿರದಲ್ಲಿ ಪ್ರತಿದಿನದ ವೇಳಾಪಟ್ಟಿಯಂತೆ ಕಾರ್ಯ ಚಟುವಟಿಕೆಗಳು ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಗಳಿಂದ ಶಿಬಿರದಲ್ಲಿ ನೀಡುವ ಮಾಹಿತಿಯನ್ನು ಪಡೆದು ದೇಶದ ಉತ್ತಮ ಪ್ರಜೆಗಳಾಗಿ ಎಂದು ಹೇಳಿದರು.

    ಜಿಲ್ಲಾ ಸಂಘಟಕರಾದ ಎಸ್. ಶಿವರಾಜ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಶಾಲೆಯ ಎಸ್. ಡಿ .ಎಂ. ಸಿ. ಉಪಾಧ್ಯಕ್ಷ ಕೃಷ್ಣಮೂರ್ತಿ, ಹಿರಿಯ ಸಹ ಶಿಕ್ಷಕಿ ದೇವಿಕಾ, ಶಾಖಾನಾಯಕ ದಕ್ಷಿಣಮೂರ್ತಿ, ಗುರುಪ್ರಸಾದ್, ಸುಮಂಗಲ, ಈರಮ್ಮ, ಜ್ಞಾನಜ್ಯೋತಿ, ಶಕುಂತಲಮ್ಮ ಹಾಗೂ ತಾಲೂಕಿನ ವಿವಿಧ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ…

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.