ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನವೆಂಬರ್ 26ರಂದು ಜಿಲ್ಲಾ ಮಟ್ಟದ ಭಾರತ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 9:30 ಗಂಟೆಗೆ ನಗರದ ಟೌನ್ ಹಾಲ್ ನಲ್ಲಿರುವ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ದಿನಾಚರಣೆ ಪ್ರಯುಕ್ತ ಕಲಾ ತಂಡಗಳೊಂದಿಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ನಂತರ ಬೆಳಿಗ್ಗೆ 11:30 ಗಂಟೆಗೆ ಎಂಪ್ರೆಸ್ ಕಾಲೇಜು ಆಡಿಟೋರಿಯಂನಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಉದ್ಘಾಟಿಸುವರು. ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ವಾದಿ ಚಿಂತಕರು ಮತ್ತು ಸಾಮಾಜಿಕ ಹೋರಾಟಗಾರ ವಿ.ಎಲ್.ನರಸಿಂಹಮೂರ್ತಿ ಅವರು ಸಂವಿಧಾನ ದಿನಾಚರಣೆ ಕುರಿತು ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್. ಕೃಷ್ಣಪ್ಪ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


