ತುಮಕೂರು: ಜಿಲ್ಲಾಡಳಿತದ ವತಿಯಿಂದ ಆಚರಿಸುವ ತುಮಕೂರು ದಸರಾ– 2025ರ ಅಂಗವಾಗಿ ಸೆಪ್ಟೆಂಬರ್ 27ರಂದು ಹಮ್ಮಿಕೊಂಡಿರುವ ಮಹಿಳಾ ಮತ್ತು ಮಕ್ಕಳ ದಸರಾ ಕಾರ್ಯಕ್ರಮದಡಿ ಮಹಿಳೆಯರು ಹಾಗೂ ಮಕ್ಕಳಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ಮಹಿಳೆಯರಿಗೆ ರಂಗೋಲಿ ಸ್ಪರ್ಧೆ (ಚುಕ್ಕಿ ಮತ್ತು ಎಳೆ ರಂಗೋಲಿ), ಲೆಮನ್ ಅಂಡ್ ಸ್ಪೂನ್, ಲೆಗ್ ಟೈಡ್ ರೇಸ್, ಮ್ಯೂಸಿಕಲ್ ಛೇರ್, ಹಗ್ಗ–ಜಗ್ಗಾಟ, ತಾಯಿ ಮತ್ತು ಮಗುವಿನ (6 ವರ್ಷದವರೆಗೆ) ಸಾಂಪ್ರದಾಯಿಕ ಉಡುಗೆ ವೇಷಭೂಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವವರು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಭವನ, ಎಂ.ಜಿ.ರಸ್ತೆ, ತುಮಕೂರು ಇವರ ಕಚೇರಿಯಲ್ಲಿ ಸೆಪ್ಟೆಂಬರ್ 20ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9901890079, 9606599437ನ್ನು ಸಂಪರ್ಕಿಸಬಹುದಾಗಿದೆ ಎಂದು ಉಪನಿರ್ದೇಶಕ ಡಾ.ಸಿದ್ದರಾಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC