ತುಮಕೂರು: ಕೌಟುಂಬಿಕ ಕಲಹದಿಂದ ಬೇಸತ್ತು ಪೊಲೀಸ್ ಸಬ್ ಇನ್ಸ್ಪೆಕ್ಟರ್ ತುಮಕೂರಿನ ಖಾಸಗಿ ಅತಿಥಿ ಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ನಾಜರಾಜಪ್ಪ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ಜುಲೈ 1 ನೇ ತಾರೀಖು ತುಮಕೂರು ನಗರದದಲ್ಲಿರುವ ದ್ವಾರಕಾ ಹೋಟೆಲ್ ಲಾಡ್ಜ್ ನಲ್ಲಿ ರೂಂ ಬಾಡಿಗೆ ಪಡೆದಿದ್ದ ಸಬ್ ಇನ್ಸ್ಪೆಕ್ಟರ್ ನಾಗರಾಜಪ್ಪ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.
ಕೊಠಡಿಯಲ್ಲಿ ಬಾಂಡ್ ಪೇಪರ್ ನಲ್ಲಿ ವಿಲ್ ಬರೆದಿಟ್ಟಿದ್ದಾರೆ. ಮೊಬೈಲ್ ಸೇರಿದಂತೆ, ಡೆತ್ ನೋಟ್ ಮತ್ತು ಬಾಂಡ್ ಪೇಪರ್ ಪೊಲೀಸರ ವಶಕ್ಕೆ ಪಡೆದಿದ್ದಾರೆ. 4 ನೇ ಮಹಡಿಯಲ್ಲಿ ರೂಂ ಬಾಡಿಗೆ ಪಡೆದಿದ್ರು, ಲಾಡ್ಜ್ ರೂಂ ನಲ್ಲೇ ರೂಂ ನಲ್ಲೇ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾರೆ.
ಕುಟುಂಬದ ಸಮಸ್ಯೆಗಳನ್ನ ಬರೆದಿಟ್ಟು ನನ್ನ ಸಾವಿಗೆ ನಾನೇ ಕಾರಣ ಎಂದು ಡೇತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ. ಇಂದು ಲಾಡ್ಜ್ ನಲ್ಲಿ ದುರ್ವಾಸನೆ ಬಂದಾಗ, ಲಾಡ್ಜ್ ಸಿಬ್ಬಂದಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ತುಮಕೂರು ನಗರ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ತುಮಕೂರಿನ ಎಂಜಿ ರಸ್ತೆಯಲ್ಲಿರುವ ದ್ವಾರಕ ಹೊಟೇಲ್ ನಲ್ಲಿ ಒಂದನೇ ತಾರೀಖಿನಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC