ತುಮಕೂರು: ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ನಗರದ ಹೊರವಲಯದ ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) 2026–27ನೇ ಶೈಕ್ಷಣಿಕ ಸಾಲಿನ ಡಿಪ್ಲೊಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.
ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿಸಲಾಗಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಎಸ್ಸೆಸ್ಸೆಲ್ಸಿ ಓದಿದ ವಿದ್ಯಾರ್ಥಿಗಳಿಗೆ ಡಿಪ್ಲೊಮಾ ಪ್ರವೇಶಾತಿ ಕಲ್ಪಿಸಿದ್ದು, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಟಿಟಿಸಿ ಪ್ರಾಂಶುಪಾಲ ಜಯ ಪ್ರಕಾಶ್ ಜೆ.ಕೆ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜಿಟಿಟಿಸಿ ತುಮಕೂರು ಕೇಂದ್ರದಲ್ಲಿ ಎಐಸಿಟಿಯಿಂದ ಮಾನ್ಯತೆ ಪಡೆದಿರುವ ಡಿಪ್ಲೊಮಾ ಕೋರ್ಸ್‌ಗಳಾದ ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ (DTDM), ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್ (DMCH), ಡಿಪ್ಲೊಮಾ ಇನ್ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ (DEEE) ನ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ಕೋರ್ಸ್ ಅವಧಿ 3+1 ವರ್ಷ (ಕೌಶಲ್ಯ ಹೆಚ್ಚಳ ಮತ್ತು ಕೈಗಾರಿಕಾ ಜ್ಞಾನಕ್ಕಾಗಿ ಒಂದು ವರ್ಷ ಕೈಗಾರಿಕಾ ತರಬೇತಿ ಕಡ್ಡಾಯ), ಮೆರಿಟ್ ಕಮ್ ರೋಸ್ಟರ್ ಸಿಸ್ಟಮ್ ಮೂಲಕ ಪ್ರವೇಶಾತಿ ನೀಡಲಾಗುವುದು. ಏ. 24 ರಿಂದ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸಲು ಮೇ 10 ಕೊನೆಯ ದಿನಾಂಕವಾಗಿದೆ ಎಂದು ಅವರು ತಿಳಿಸಿದರು.
ಆನ್ ಲೈನ್ ಅರ್ಜಿಯನ್ನು https://gttc-hrms.karnataka.gov.in/Admissions/ ಈ ವಿಳಾಸದಿಂದ ಪಡೆಯಬಹುದಾಗಿದೆ.
ಎಸ್ ಸಿ, ಎಸ್ಟಿ ಮತ್ತು ವರ್ಗ–1ಕ್ಕೆ 50 ರೂ. ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ ಎಂದರು. ಕೌಶಲ್ಯ ಸಹಾಯವಾಣಿ: 155267 ಹಾಗೂ ಹೆಚ್ಚಿನ ವಿವರಗಳಿಗೆ ಪ್ರಾಂಶುಪಾಲರು, ಜಿಟಿಟಿಸಿ, ತುಮಕೂರು. ದೂ. ಸಂ: 0816–2009077, 97313–51039, ರವರನ್ನು ಸಂಪರ್ಕಿಸುವಂತೆ ಮನವಿ ಮಾಡಿದರು. ಉಪನ್ಯಾಸಕ ಮಹೇಶ್ ಬಿ.ಆರ್., ಗಿರಿಧರ್ ವಿ.ಇ. ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


