nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026
    Facebook Twitter Instagram
    ಟ್ರೆಂಡಿಂಗ್
    • ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    • ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ.29ರಿಂದ ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ: ಏನೇನು ಕಾರ್ಯಕ್ರಮಗಳು ಇರಲಿವೆ?
    ತುಮಕೂರು December 28, 2025

    ಡಿ.29ರಿಂದ ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ: ಏನೇನು ಕಾರ್ಯಕ್ರಮಗಳು ಇರಲಿವೆ?

    By adminDecember 28, 2025No Comments2 Mins Read
    shubha kalyan

    ತುಮಕೂರು: ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿ.29 ಮತ್ತು 30 ರಂದು ಇಲ್ಲಿನ ಗಾಜಿನ ಮನೆಯಲ್ಲಿ ಎರಡು ದಿನಗಳ ಕಾಲ ನಡೆಯಲಿದೆ. ಡಾ. ಕರೀಗೌಡ ಬೀಚನಹಳ್ಳಿ ಇವರು ಸಮ್ಮೇಳನದ ಅಧ್ಯಕ್ಷರಾಗಿದ್ದು, ಎರಡು ದಿನಗಳ ಕಾಲ ವಿವಿಧ ಗೋಷ್ಠಿಗಳು ನಡೆಯಲಿವೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

    ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಸಮ್ಮೇಳನದಲ್ಲಿ ಮಕ್ಕಳ ಗೋಷ್ಠಿಗೂ ಅವಕಾಶ ನೀಡಲಾಗಿದೆ. ಕವಿ, ಸಾಹಿತಿಗಳು ಮತ್ತು ಓದುಗರನ್ನು ಒಗ್ಗೂಡಿಸುವ ಕಾರ್ಯಕ್ರಮವಾಗಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದರು. ಸಮ್ಮೇಳನಕ್ಕೆ ಅಂದಾಜು 3 ರಿಂದ 4 ಸಾವಿರ ಜನ ಸಾಹಿತ್ಯಾಸಕ್ತರು ಭಾಗವಹಿಸುವ ನಿರೀಕ್ಷೆ ಇದ್ದು, ಎಲ್ಲರಿಗೂ ಕುಡಿಯುವ ನೀರು, ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಶಾಲಾ ಮಕ್ಕಳು, ಶಿಕ್ಷಕರೂ ಸಹ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ತಿಳಿಸಲಾಗಿದೆ ಎಂದರು.


    Provided by
    Provided by

    ಸಮ್ಮೇಳನದ ಅಂಗವಾಗಿ ಡಿಸೆಂಬರ್ 29ರ ಬೆಳಗ್ಗೆ 7.30 ಗಂಟೆಗೆ ಗಾಜಿನ ಮನೆ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಹಾಗೂ 8 ಗಂಟೆಗೆ ನಗರದ ಮಹಾನಗರ ಪಾಲಿಕೆ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮೆರವಣಿಗೆ ಪ್ರಾರಂಭವಾಗಿ ಎಂ.ಜಿ.ರಸ್ತೆ, ಗುಬ್ಬಿ ಚೌಕ, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಮಾರ್ಗವಾಗಿ ಗಾಜಿನ ಮನೆಯವರೆಗೂ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು.

    ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಡಿಸೆಂಬರ್ 29ರ ಬೆಳಗ್ಗೆ 10 ಗಂಟೆಗೆ ಗಾಜಿನ ಮನೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ನವದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ ಅವರು ಸಮ್ಮೇಳನದ ನೆನಪಿನ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಸಚಿವರು, ಸಂಸದರು, ಶಾಸಕರು, ಲೇಖಕರು, ಕಲಾವಿದರು, ಸಾಹಿತಿಗಳು, ಶಿಕ್ಷಕರು, ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಸಾರ್ವಜನಿಕರು ಸೇರಿದಂತೆ 4,000 ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು.

    ಡಿಸೆಂಬರ್ 29ರಂದು ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ ಅಂಗವಾಗಿ ಹಿರಿಯ ಲೇಖಕರಾದ ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನಂತರ ಕುವೆಂಪು ಅವರ ಜೀವನ ಮತ್ತು ಸಾಹಿತ್ಯ ಕುರಿತಾಗಿ ಉಪನ್ಯಾಸ ನೀಡಲಿದ್ದಾರೆ.

    ಎರಡು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ದಲಿತ ಸಾಹಿತ್ಯ ಕವಿಗೋಷ್ಠಿ ಹಾಗೂ ಮಕ್ಕಳ ಗೋಷ್ಠಿ ಸೇರಿದಂತೆ ಆರು ವಿಚಾರ ಗೋಷ್ಠಿಗಳು ಇರಲಿವೆ. ಮಕ್ಕಳ ಕವಿಗೋಷ್ಠಿ ಇದೇ ಮೊದಲ ಬಾರಿಗೆ ಏರ್ಪಡಿಸಿರುವುದು ವಿಶೇಷವಾಗಿದೆ ಎಂದರು. ಅಲ್ಲದೆ ಸುಗಮ ಸಂಗೀತ, ನೃತ್ಯ ಕಾರ್ಯಕ್ರಮ, ರಂಗಗೀತೆಗಳ ಗಾಯನ, ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಹರಿಕಥೆ ಸೇರಿದಂತೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಅವರು ತಿಳಿಸಿದರು.

    ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರು, ಸರ್ಕಾರಿ ನೌಕರರಿಗೆ 2 ದಿನಗಳು ಒ.ಒ.ಡಿ. (OOD) ಸೌಲಭ್ಯ ನೀಡಲಾಗುವುದು. ಸಮ್ಮೇಳನಕ್ಕೆ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿ-ಸಿಬ್ಬಂದಿ, ಸಾಹಿತಿಗಳು, ಕಲಾವಿದರು, ಲೇಖಕರು, ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.

    ಪತ್ರಿಕಾ ಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಹಾಗೂ ಇತರರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಚಿಕ್ಕನಾಯಕನಹಳ್ಳಿ : ಭವಿಷ್ಯದ ಕನಸನ್ನು ಹೊತ್ತು ವಿದ್ಯಾಬ್ಯಾಸಕ್ಕಾಗಿ ಹಾಸ್ಟೇಲ್‌ ನಲ್ಲಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉತ್ತಮ ಆಹಾರವನ್ನು ನೀಡುವ ಮೂಲಕ ಅದ್ಯಯನಕ್ಕೆ…

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.