ತುಮಕೂರು: ಜಿಲ್ಲೆಯಲ್ಲಿ ಮೇ 1ರಂದು ಭಗವಾನ್ ಬುದ್ಧ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳು ಸಜ್ಜಾಗಿವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬುದ್ಧ ಧಮ್ಮ ಪ್ರತಿಷ್ಠಾನ ಹಾಗೂ ಧಮ್ಮ ಲೋಕ ಬುದ್ಧ ವಿಹಾರದ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಮೇ 1ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಗವಾನ್ ಬುದ್ಧರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜಯಂತಿಗೆ ಚಾಲನೆ ನೀಡಲಾಗುವುದು.
ನಂತರ ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಗೂಳಹರಿ ಗೆದ್ದಲಹಳ್ಳಿಯ ಗೌತಮ ಬುದ್ಧ ನಗರದಲ್ಲಿರುವ ‘ಧಮ್ಮ ಲೋಕ ಬುದ್ಧ ವಿಹಾರ’ದಲ್ಲಿ ವಿಶೇಷ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


