ತುಮಕೂರು: 2025–26ನೇ ಸಾಲಿನ ತುಮಕೂರು ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆಯನ್ನು ದಿನಾಂಕ 24.10.2025 ರಂದು ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೈಲ್ವೇ ಸ್ಟೇಷನ್ ರಸ್ತೆ, ತುಮಕೂರು ಇಲ್ಲಿ ಏರ್ಪಡಿಸಲಾಗಿದೆ.
ಈ ಯುವಜನೋತ್ಸವ ಕಾರ್ಯಕ್ರಮದಲ್ಲಿ 15 ರಿಂದ ವರ್ಷದೊಳಗಿರುವ ವಿವಿಧ ಸಂಘಸಂಸ್ಥೆಗಳ ಯುವಕ/ ಯುವತಿಯರು ಹಾಗೂ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಕೆಳಕಂಡ ಸ್ಪರ್ಧೆಗಳ ಆಯ್ಕೆಯಲ್ಲಿ ಭಾಗವಹಿಸಬಹುದಾಗಿದೆ. ಯುವಕ/ ಯುವತಿಯರಿಗೆ ಪ್ರತ್ಯೇಕ ಸ್ಪರ್ಧೆ ಇರುವುದಿಲ್ಲ.
- ಕವಿತೆ ಮತ್ತು ಭಾಷಣ ಸ್ಪರ್ಧೆ ಗುಬ್ಬಿ ವೀರಣ್ಣ ಕಲಾಕ್ಷೇತ್ರ ಬಾಲವನದಲ್ಲಿ ನಡೆಯಲಿದೆ
- ಕಥೆ ಬರೆಯುವ ಸ್ಪರ್ಧೆ ತುಮಕೂರು ನಗರದ ಕೇಂದ್ರ ಗ್ರಂಥಾಲಯದಲ್ಲಿ ನಡೆಯಲಿದೆ.
- ಜನಪದ ಗೀತೆ ಸ್ಪರ್ಧೆಯು ತುಮಕೂರಿನ ಎಂ.ಜಿ.ರಸ್ತೆಯಲ್ಲಿರುವ ಬಾಲಭವನದಲ್ಲಿ ನಡೆಯಲಿದೆ.
- ಜನಪದ ನೃತ್ಯ ಸ್ಪರ್ಧೆ ತುಮಕೂರು ರೈಲ್ವೇಸ್ಟೇಷನ್ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.
- ಚಿತ್ರಕಲೆ ಸ್ಪರ್ಧೆಯು ತುಮಕೂರಿನ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.
- ವಿಜ್ಞಾನ ಮೇಳ ತುಮಕೂರು ವಿಶ್ವವಿದ್ಯಾಲಯ ವಿಜ್ಞಾನ ಕಾಲೇಜಿನಲ್ಲಿ 25.10.2025ರಂದು ನಡೆಯಲಿದೆ.
ಸ್ಪರ್ಧಾಳುಗಳು ತಮ್ಮ ವಯಸ್ಸಿನ ದೃಡೀಕರಣ ಪತ್ರ, ಆಧಾರ್ ಕಾರ್ಡ್, 1 ಫೋಟೋ, ಐ.ಎಫ್.ಎಸ್. ಕೋಡ್ ಇರುವ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಯೊಂದಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಲು ಸೂಚಿಸಿದೆ ಹಾಗೂ ಆಸಕ್ತಿಯುಳ್ಳ ಸಂಘ–ಸಂಸ್ಥೆಗಳ ಯುವಕ/ಯುವತಿಯರು ವಿದ್ಯಾರ್ಥಿ/ವಿದ್ಯಾರ್ಥಿನಿಯರು ದಿನಾಂಕ: 24.10.2025 ರಂದು ಬೆಳಿಗ್ಗೆ 9.00 ಗಂಟೆಗೆ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತುಮಕೂರು ಇಲ್ಲಿ ಮಂಜುನಾಥ್, ದ್ವಿ.ದ.ಸ, ಇವರಲ್ಲಿ ನೊಂದಣಿ ಮಾಡಿಕೊಳ್ಳಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9741691379 (ಮಂಜುನಾಥ್) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC