ತುಮಕೂರು: ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳನ್ನು ಪೊಲೀಸರು ಬುಧವಾರ ಮಧ್ಯಾಹ್ನ ವಶಕ್ಕೆ ಪಡೆದಿದ್ದಾರೆ.
ನಗರದ ಖಾದರ್ ನಗರದ ಕಲ್ಲೇಶ್ವರ ಆಸ್ಪತ್ರೆ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಜಯನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (SI) ತಿಪ್ಪೇಸ್ವಾಮಿ ಮತ್ತು ಸಿಬ್ಬಂದಿ ಸ್ಥಳದ ಮೇಲೆ ದಾಳಿ ನಡೆಸಿದ್ದಾರೆ.
ಪೊಲೀಸ್ ದಾಳಿಯ ವೇಳೆ ಶ್ರೀಕಾಂತ್ (34 ವರ್ಷ), ಗೌತಮ್ ಬಿ.ಎಸ್. (28 ವರ್ಷ), ಆಕಾಶ್ ಆರ್.ಬಿ. (36 ವರ್ಷ) ಎಂಬ ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ‘ಎಂ ಎಂ’ (MDMA) ಎನ್ನಲಾದ ಮಾದಕ ವಸ್ತುವನ್ನು ಮಾರಾಟ ಮಾಡಲು ಸಜ್ಜಾಗಿದ್ದರು. ದಾಳಿಯ ವೇಳೆ ಪೊಲೀಸರು ಸುಮಾರು 5 ಗ್ರಾಂ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.
ಜಯನಗರ ಪೊಲೀಸ್ ಠಾಣೆಯ ಎಸ್‌ಐ ತಿಪ್ಪೇಸ್ವಾಮಿ ಹಾಗೂ ಹೆಡ್ ಕಾನ್ಸ್ ಟೇಬಲ್ ಗಳ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳ ವಿರುದ್ಧ ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


