nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ದಸರಾ ಉತ್ಸವ:  ಅಧಿಕಾರಿಗಳು ಕಾರ್ಯಪ್ರವೃತ್ತರಾಗಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    ತುಮಕೂರು September 26, 2024

    ತುಮಕೂರು ದಸರಾ ಉತ್ಸವ:  ಅಧಿಕಾರಿಗಳು ಕಾರ್ಯಪ್ರವೃತ್ತರಾಗಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    By adminSeptember 26, 2024No Comments2 Mins Read
    shubha kalyan

    ತುಮಕೂರು: ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯಲ್ಲಿ ಆಚರಿಸುತ್ತಿರುವ ದಸರಾ ಉತ್ಸವಕ್ಕೆ ಸಂಬಂಧಿಸಿದ ಅಗತ್ಯ ಪೂರ್ವ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

    ದಸರಾ ಉತ್ಸವ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಶಸ್ವಿ ದಸರಾ ಉತ್ಸವ ಆಚರಣೆಗಾಗಿ 12ಕ್ಕಿಂತ ಹೆಚ್ಚು ಉಪಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗಳು ತಮಗೆ ವಹಿಸಿರುವ ಎಲ್ಲಾ ಕಾರ್ಯ ಚಟುವಟಿಕೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದ ಅವರು ಪ್ರಸ್ತುತದವರೆಗೆ ಆಗಿರುವ ಪ್ರಗತಿ ವಿವರವನ್ನು ಪರಿಶೀಲಿಸಿದರು.


    Provided by
    Provided by

    ನಾಡಿನ ಸಂಸ್ಕೃತಿಯನ್ನು ಬಿಂಬಿಸುವಂತೆ ವಿದ್ಯುತ್ ಅಲಂಕಾರವು ವೈವಿಧ್ಯಮಯವಾಗಿ ವಿನ್ಯಾಸಗೊಳಿಸಿ ನಗರವನ್ನು ಅಲಂಕೃತಗೊಳಿಸಬೇಕು. ಈ ನಿಟ್ಟಿನಲ್ಲಿ ಮಹಾನಗರಪಾಲಿಕೆ ಹಾಗೂ ಬೆಸ್ಕಾಂ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕೆಂದು ಸೂಚಿಸಿದರು.

    ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸುಸಜ್ಜಿತ ಹಾಗೂ ಸುರಕ್ಷಿತವಾದ ಹೆಲಿಪ್ಯಾಡ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

    ಪ್ರತಿ ದಿನ ಸಂಜೆ ನಡೆಯುವಂತಹ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾರ್ವಜನಿಕರಿಗೆ ಆಕರ್ಷಕವಾಗುವ ರೀತಿಯಲ್ಲಿ ಕಾರ್ಯಕ್ರಮಗಳ ಪಟ್ಟಿಯನ್ನು ತಯಾರಿಸಿ ವರದಿ ಸಲ್ಲಿಸುವಂತೆ ಮುಜರಾಯಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ದಸರಾ ಉತ್ಸವದಲ್ಲಿ ನಡೆಯುವಂತಹ ವಿವಿಧ ಕಾರ್ಯಕ್ರಮಗಳು, ಸಮಾರಂಭ, ಕ್ರೀಡೆ ಬಗ್ಗೆ ಸಾಮಾಜಿಕ ಮಾಧ್ಯಮ, ಎಲ್‌ ಇಡಿ ಪರದೆ, ಕರಪತ್ರ, ಬ್ಯಾನರ್, ದಿನಪತ್ರಿಕೆ, ಟಿವಿ, ಮೊದಲಾದ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ತಲುಪಿಸಬೇಕು ಹಾಗೂ ಕಾರ್ಯಕ್ರಮದಲ್ಲಿ ದಸರಾ ಲೋಗೋ ಕಡ್ಡಾಯವಾಗಿ ಬಳಸಬೇಕು. ವಿವಿಧ ಉಪ ಸಮಿತಿಗಳಿಗೆ, ಅಧಿಕಾರಿಗಳಿಗೆ ವಹಿಸಿರುವಂತಹ ಸೂಚನೆ ನಿರ್ದೇಶನಗಳನ್ನು ಲೋಪವಿಲ್ಲದಂತೆ ನಿರ್ವಹಿಸಬೇಕೆಂದು ಸೂಚಿಸಿದರು.

    ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಮಾತನಾಡಿ, ದಸರಾ ಕಾರ್ಯಕ್ರಮದ ಅಂಗವಾಗಿ ಆಚರಿಸಲಾಗುವ ಧಾರ್ಮಿಕ ಪೂಜಾ ವಿಧಿ ವಿಧಾನಗಳು ಶಾಸ್ತ್ರೋಕ್ತವಾಗಿ ನಡೆಯಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸೂಚಿಸಿದರು.

    ಸಭೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸೋನಿಯಾ ವರ್ಣೇಕರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ, ವಿವಿಧ ದೇವಾಲಯಗಳ ಅರ್ಚಕರು ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ…

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.