ತುಮಕೂರು: ತುಮಕೂರು ದಸರಾ ಮಹೋತ್ಸವ–2024ರ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನ ಹಾಗೂ ಡಾ.ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಅಕ್ಟೋಬರ್ 11 ಮತ್ತು 12ರಂದು “ಜನಪ್ರಿಯ ಆಹಾರ ಮೇಳ–2024”ನ್ನು ಆಯೋಜಿಸಿದ್ದು, ಆಹಾರ ಮೇಳದಲ್ಲಿ ಮಳಿಗೆ ತೆರೆಯಲು ಇಚ್ಛಿಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ತಮ್ಮ ಅರ್ಜಿಯನ್ನು ಜಂಟಿ ನಿರ್ದೇಶಕರು ಮತ್ತು ಸದಸ್ಯ ಕಾರ್ಯದರ್ಶಿ, ಆಹಾರ ಮೇಳ ಉಪಸಮಿತಿ, ತುಮಕೂರು ದಸರಾ ಮಹೋತ್ಸವ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಕಚೇರಿ, ಕೊಠಡಿ ಸಂಖ್ಯೆ 205, 2ನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ, ತುಮಕೂರು ಇವರಿಗೆ ಅಕ್ಟೋಬರ್ 5ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮಂಟೇಸ್ವಾಮಿ (ಮೊ.ಸಂ.9448992049) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296