ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕೆ ಸಂಘದ ಸಂಯುಕ್ತಾಶ್ರಯದಲ್ಲಿ ಜನವರಿ 26 ರಿಂದ 28ರವರೆಗೆ ನಗರದ ಎಸ್.ಎಸ್.ಪುರಂನಲ್ಲಿರುವ ತೋಟಗಾರಿಕೆ ಇಲಾಖೆ ಆವರಣದಲ್ಲಿ “ಫಲಪುಷ್ಪ ಪ್ರದರ್ಶನ”ವನ್ನು ಏರ್ಪಡಿಸಲಾಗಿದೆ.
ಫಲಪುಷ್ಪ ಪ್ರದರ್ಶನ ಕಾರ್ಯಕ್ರಮವನ್ನು ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ಅವರು ಜನವರಿ 26ರ ಸಂಜೆ 5 ಗಂಟೆಗೆ ಉದ್ಘಾಟಿಸಲಿದ್ದಾರೆ.
ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಳಿಗೆಗಳ ಉದ್ಘಾಟನೆ, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ತಾಂತ್ರಿಕ ಕರಪತ್ರ ಬಿಡುಗಡೆ ನೆರವೇರಿಸಲಿದ್ದು, ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆವಹಿಸಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಜನವರಿ 26ರ ಸಂಜೆ 5 ಗಂಟೆ ಹಾಗೂ 27ರ ಸಂಜೆ 6 ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮದಲ್ಲಿ ವಿವಿಧ ಜನಪ್ರತಿನಿಧಿಗಳು, ರೈತಬಾಂಧವರು, ಅಧಿಕಾರಿಗಳು ಭಾಗವಹಿಸಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4