ತುಮಕೂರು: ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ದನ–ಕರುಗಳ ಮೇವಿನ ಸಮಸ್ಯೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ ಎಂದು ತಹಶೀಲ್ದಾರ್ ರಾಜೇಶ್ವರಿ ತಿಳಿಸಿದ್ದಾರೆ.
ತುಮಕೂರು ತಾಲ್ಲೂಕಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆಗಳ ಬಗ್ಗೆ ತಾಲೂಕು ಕಚೇರಿ ದೂರವಾಣಿ ಸಂಖ್ಯೆ: 0816–2278496ನ್ನು ಸಂಪರ್ಕಿಸಬಹುದಾಗಿದ್ದು, ಸಾರ್ವಜನಿಕರು ಸದುಪಯೋಗ ಪಡೆಯಬೇಕೆಂದು ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4