ತುಮಕೂರು: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯ ವಿವರ: ತುಮಕೂರು ತಾಲೂಕಿನ ಕೋರ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಹಾಳ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಲಾರಿಗೆ ಹಿಂಬದಿಯಿಂದ ಕಾರು ವೇಗವಾಗಿ ಢಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ. ಇಂದು (ಜನವರಿ 26) ಬೆಳಿಗ್ಗೆ ಸುಮಾರು ಆರು ಗಂಟೆಯ ಸಮಯದಲ್ಲಿ ಈ ಘಟನೆ ನಡೆದಿದೆ.
ಮೃತಪಟ್ಟವರು: ಅನಿಕೇತ್ (25, ಆಗ್ರಾ, ಉತ್ತರ ಪ್ರದೇಶ), ಸನ್ಮುಕ್ತಿ (35, ಆಂಧ್ರ ಪ್ರದೇಶ) ಮತ್ತು ಅಬೀರ್ (25, ಜಲಂಧರ್, ಪಂಜಾಬ್).
ಗಾಯಗೊಂಡವರು: ಆನೇಕಲ್ ಮೂಲದ ವಿರೇಶ್, ಪಶ್ಚಿಮ ಬಂಗಾಳದ ಸಿಂಚಿತಾ, ಸಿದ್ಧಾರ್ಥ್ ಮತ್ತು ಕೃತಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಕೂಡಲೇ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೋರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


