ತುಮಕೂರು: ಜಿಲ್ಲೆಯ ತುಮಕೂರು ತಾಲ್ಲೂಕಿನ ಬಾಣಾವರ ಗೇಟ್ ಬಳಿ ಭಾನುವಾರ ಸಂಜೆ ನಡೆದ ಮೂರು ಕಾರುಗಳ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರ ವಿವರ: ನಗರದ ಯಾದವ ನಗರ ನಿವಾಸಿಗಳಾದ ಸುರೇಶ್ (55) ಮತ್ತು ಮುರಳಿ (60) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಸುರೇಶ್ ಅವರು ಗುಬ್ಬಿ ತಾಲ್ಲೂಕು ಪಂಚಾಯಿತಿಯ ಮಾಜಿ ಸದಸ್ಯರಾಗಿದ್ದರು.
ಗಾಯಾಳುಗಳು: ಸೈಬರ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರಾಮಕೃಷ್ಣಪ್ಪ, ಜೆಡಿಎಸ್ ವಕ್ತಾರ ಜಯಣ್ಣ ಹಾಗೂ ಮಂಜುನಾಥ್ ಸೇರಿದಂತೆ ಒಟ್ಟು ಐದು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ನಡೆದಿದ್ದು ಹೇಗೆ? ಇನ್‌ಸ್ಪೆಕ್ಟರ್ ರಾಮಕೃಷ್ಣಪ್ಪ ಅವರು ತಮ್ಮ ಸ್ನೇಹಿತರೊಂದಿಗೆ ಆದಿಚುಂಚನಗಿರಿಗೆ ಭೇಟಿ ನೀಡಿ, ಕುಣಿಗಲ್ ಮಾರ್ಗವಾಗಿ ವಾಪಸ್ ಬರುತ್ತಿದ್ದರು. ಈ ಸಂದರ್ಭದಲ್ಲಿ ತುಮಕೂರು ಕಡೆಯಿಂದ ವೇಗವಾಗಿ ಬಂದ ಕಾರೊಂದು ತನ್ನ ಮುಂದೆ ಚಲಿಸುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ನಂತರ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ರಾಮಕೃಷ್ಣಪ್ಪ ಅವರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಾಮಕೃಷ್ಣಪ್ಪ ಅವರ ಕಾರಿನಲ್ಲಿದ್ದ ಸುರೇಶ್ ಮತ್ತು ಮುರಳಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


