nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿರಾದಲ್ಲಿ LPG ಸಿಲಿಂಡರ್ ಅಭಾವ: ಹಬ್ಬದ ಸಂಭ್ರಮದ ನಡುವೆ ಗ್ರಾಹಕರಿಗೆ ಬಿಸಿ

    March 18, 2026

    ಮಹನೀಯರ ಜಯಂತಿ ಅದ್ದೂರಿ ಆಚರಣೆ: ಬಳ್ಳಾರಿ ಎಡಿಸಿ ಮಹಮ್ಮದ್ ಝುಬೇರ್ ಎನ್. ಹೇಳಿಕೆ

    March 17, 2026

    ಬಳ್ಳಾರಿ:  SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ

    March 17, 2026
    Facebook Twitter Instagram
    ಟ್ರೆಂಡಿಂಗ್
    • ಶಿರಾದಲ್ಲಿ LPG ಸಿಲಿಂಡರ್ ಅಭಾವ: ಹಬ್ಬದ ಸಂಭ್ರಮದ ನಡುವೆ ಗ್ರಾಹಕರಿಗೆ ಬಿಸಿ
    • ಮಹನೀಯರ ಜಯಂತಿ ಅದ್ದೂರಿ ಆಚರಣೆ: ಬಳ್ಳಾರಿ ಎಡಿಸಿ ಮಹಮ್ಮದ್ ಝುಬೇರ್ ಎನ್. ಹೇಳಿಕೆ
    • ಬಳ್ಳಾರಿ:  SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ
    • ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ ಒದಗಿಸಲು ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ
    • ಮಾ.18ರಿಂದ SSLC ಪರೀಕ್ಷೆ ಆರಂಭ: 8.65 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ, ಶಿಕ್ಷಣ ಸಚಿವರ ಶುಭಾಶಯ
    • ‘ಸೆರಗ ಸರ್ಸೆ’ ಹಾಡಿನ ವಿವಾದ: ಫಿಲ್ಮ್ ಚೇಂಬರ್‌ ಗೆ ಮಹಿಳಾ ಆಯೋಗದಿಂದ ಪತ್ರ
    • ತಿಪಟೂರಿನಲ್ಲಿ ಅಡುಗೆ ಅನಿಲ ಅಭಾವ: ಸಿಲಿಂಡರ್‌ ಗಾಗಿ ಗ್ರಾಹಕರ ಹೈರಾಣು
    • ತುಮಕೂರು: ರಂಜಾನ್‌ ಸಂಭ್ರಮಕ್ಕೆ ಅಡ್ಡಿಯಾದ ಸಿಲಿಂಡರ್‌ ಕೊರತೆ; ದುಬಾರಿಯಾದ ಸಮೋಸ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಕನ್ನಡ ಶಾಲೆಗಳ ಬಲವರ್ಧನೆಗೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ
    ತುಮಕೂರು December 31, 2025

    ತುಮಕೂರು: ಕನ್ನಡ ಶಾಲೆಗಳ ಬಲವರ್ಧನೆಗೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ

    By adminDecember 31, 2025No Comments2 Mins Read
    sahithya sammelana

    ತುಮಕೂರು: ನಗರದ ಅಮಾನಿಕೇರೆ ಗಜಾನನ ಮಂಟಪದಲ್ಲಿ 2 ದಿನಗಳ ಕಾಲ ಆಯೋಜಿಸಿದ್ದ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಗಳವಾರ ಸಂಜೆ ವಿದ್ಯುಕ್ತ ತೆರೆಬಿದ್ದಿತು. ಸಮಾರೋಪ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ಡಾ. ಕರಿಗೌಡ ಬೀಚನಹಳ್ಳಿ ದಂಪತಿಗೆ ಗೌರವ ಸನ್ಮಾನದೊಂದಿಗೆ ಕನ್ನಡ ಶಾಲೆಗಳನ್ನು ಮುಚ್ಚದೆ ಅವುಗಳನ್ನು ಬಲಪಡಿಸುವ ಕ್ರಮಕೈಗೊಳ್ಳುವುದು ಸೇರಿದಂತೆ ನಾಲ್ಕು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.

    ಸಮಾರೋಪ ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ ನೆರವೇರಿಸಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಕೆ.ಎನ್. ರಾಜಣ್ಣ ಅವರು, ಈಗಿನ ಮಕ್ಕಳು ಮೊಬೈಲ್ ಬಳಕೆಯಿಂದ ಕೇವಲ ತಾಂತ್ರಿಕ ಜ್ಞಾನದ ಅರಿವು ಪಡೆಯುತ್ತಿದ್ದಾರೆಯೇ ವಿನಃ ಮಾನವೀಯ ಸಂಬಂಧ ಹಾಗೂ ನೈತಿಕ ಮೌಲ್ಯಗಳಿಂದ ದೂರವಾಗುತ್ತಿದ್ದಾರೆ. ಮಕ್ಕಳಿಗೆ ಮೊಬೈಲ್ ಬಿಡಿಸಿ ಪುಸ್ತಕ, ಸಾಹಿತ್ಯ ಓದಿನ ಅಭಿರುಚಿ ಬೆಳೆಸಬೇಕು. ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗೆ ಓದು ಅನಿವಾರ್ಯ. ಮಕ್ಕಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸಿದರೆ ಭಾಷೆಯ ಉಳಿವು ಸಾಧ್ಯ ಎಂದರು.


    Provided by
    Provided by

    ಹಿಂದೆ ಬಸ್ಸಿನಲ್ಲಿ ಪ್ರಯಾಣಿಸುವಾಗ ಅಕ್ಕಪಕ್ಕದವರನ್ನು ಪರಿಚಯ ಮಾಡಿಕೊಂಡು ಅನುಭವಗಳನ್ನು ಹಂಚಿಕೊಳ್ಳುವ ಸಂಸ್ಕೃತಿ ಇತ್ತು. ಆದರೆ ಇಂದು ಬಸ್ ಪ್ರಯಾಣಿಕರೆಲ್ಲರೂ ಮೊಬೈಲ್‌ನಲ್ಲಿ ಮುಳುಗಿಹೋಗಿರುತ್ತಾರೆ. ಇದು ಮಾನಸಿಕ ಮತ್ತು ಸಾಮಾಜಿಕ ಅನಾಹುತಗಳಿಗೆ ಎಡೆಮಾಡಿಕೊಟ್ಟಿದೆ. ಇಂದು ಸಾಹಿತ್ಯ, ದಿನಪತ್ರಿಕೆ ಓದುಗರ ಸಂಖ್ಯೆಯೇ ಕಡಿಮೆಯಾಗುತ್ತಿದೆ. ಸಂಪಾದಕೀಯ ಪುಟದಲ್ಲಿ ಪ್ರಕಟವಾಗುವ ಲೇಖನಗಳನ್ನು ಓದಿದರೆ ನಮ್ಮ ಜ್ಞಾನಾರ್ಜನೆ ವಿಸ್ತಾರಗೊಳ್ಳುತ್ತದೆ. ಆದರೆ ಇದನ್ನು ಯುವ ಪೀಳಿಗೆ ಅರ್ಥೈಸಿಕೊಳ್ಳದೆ ಮೊಬೈಲ್ ಸಾಕು ಎನ್ನುವ ಗೀಳಿಗೆ ಬಿದ್ದಿದ್ದಾರೆ ಎಂದು ಹೇಳಿದರು.

    ಕನ್ನಡ ಶಾಲೆಗಳು ಪೋಷಕರಿಂದಲೇ ಅವನತಿ: ನಿಶ್ಚಲಾನಂದ ಶ್ರೀ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಡಾ. ಶ್ರೀ ನಿಶ್ಚಲಾನಂದ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡಿ, ಕನ್ನಡ ಮಾಧ್ಯಮ ಶಾಲೆಗಳನ್ನು ಸರ್ಕಾರ, ಸಿಎಂ ಮುಚ್ಚುತ್ತಿಲ್ಲ. ಎಷ್ಟೋ ವಿದ್ಯಾರ್ಥಿಗಳು ಬಂದರೂ ಅವರನ್ನು ದಾಖಲಿಸಿಕೊಂಡು ಉತ್ತಮ ಬೋಧನೆ ಮಾಡುವಷ್ಟು ಸಾಮರ್ಥ್ಯ ಹೊಂದಿವೆ. ಆದರೆ ಕನ್ನಡ ಶಾಲೆಗಳು ಪೋಷಕರ ನಿರ್ಲಕ್ಷ್ಯ, ಉಪೇಕ್ಷೆಯಿಂದಲೇ ಅವನತಿಯ ಹಾದಿ ಹಿಡಿಯುತ್ತಿವೆ. ಕನಿಷ್ಠ 5ನೇ ತರಗತಿಯವರೆಗೆ ಕನ್ನಡ ಶಾಲೆಯಲ್ಲಿ ಓದುವುದನ್ನು ಕಡ್ಡಾಯಗೊಳಿಸಬೇಕು. ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯದಲ್ಲಿ ಜನಪದ ಸಂಗ್ರಹಾಲಯ ಸ್ಥಾಪನೆ ಬಗ್ಗೆ ಪ್ರಸ್ತಾಪಿಸಲಾಗಿದೆ. ಅದನ್ನು ವೇದಿಕೆಯಲ್ಲೇ ಮರೆತು ಬರಬಾರದು. ತುಮಕೂರು ಜಿಲ್ಲೆ ನೂತನ ಕ್ಯಾಂಪಸ್‌ಗಳಲ್ಲಿ ಮಾಡಿಸಿ ಬೆಳವಣಿಗೆಗೆ ಆದ್ಯತೆ ನೀಡುವುದು ಉತ್ತಮ. ಬೆಂಗಳೂರಿಗೆ ಪರ್ಯಾಯವಾಗಿ ಬೆಳೆಯುತ್ತಿರುವ ತುಮಕೂರಿಗೆ ಪೂರಕವಾಗಿ ತುಮಕೂರು ವಿವಿಯನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸುವ ಅಗತ್ಯವಿದೆ ಎಂದರು.

    ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳು:

    • ವಿದ್ಯಾರ್ಥಿಗಳ ಕೊರತೆಯಿಂದ ನಡೆಯುತ್ತಿರುವ ಕನ್ನಡ ಶಾಲೆಗಳನ್ನು ಮುಚ್ಚದೆ, ಅವುಗಳನ್ನು ಬಲಪಡಿಸಲು ಕ್ರಮ ಕೈಗೊಳ್ಳಬೇಕು.
    • ತುಮಕೂರು ಜಿಲ್ಲೆ ಜಾನಪದ ಕಣಜ ಎಂದೇ ಪ್ರಸಿದ್ಧಿಯಾಗಿದೆ. ಜಿಲ್ಲೆಯಲ್ಲಿ ಅಳಿದುಳಿದ ಜಾನಪದ ವಸ್ತುಗಳನ್ನು ಸಂಗ್ರಹಿಸಿ ತುಮಕೂರು ಬಳಿ ಜಾನಪದ ಲೋಕ ಮಾದರಿ ಸಂಗ್ರಹಾಲಯ ನಿರ್ಮಾಣವಾಗಬೇಕು. ಮತ್ತು ತುಮಕೂರು ಬಳಿ ಕಲಾಗ್ರಾಮದ ನಿರ್ಮಾಣಕ್ಕೆ ಐದು ಎಕರೆ ಭೂಮಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿಗೆ ನೀಡಬೇಕು.
    • ಕರ್ನಾಟಕ ರಾಜ್ಯ ಸರ್ಕಾರದ ಗ್ರಂಥಾಲಯ ಇಲಾಖೆ ಆಯಾ ವರ್ಷ ಪ್ರಕಟವಾಗುವ ಪುಸ್ತಕಗಳನ್ನು ಆಯಾ ವರ್ಷವೇ ಖರೀದಿಸಿ ಲೇಖಕರಿಗೆ, ಪ್ರಕಾಶಕರಿಗೆ ಹಣ ಬಿಡುಗಡೆ ಮಾಡುವ ಮೂಲಕ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸಬೇಕು.
    • ತುಮಕೂರು ಜಿಲ್ಲೆ ಕೋಟೆ ಕೊತ್ತಲಗಳ ನಾಡು, ಸ್ಮಾರಕಗಳ ಬೀಡಾಗಿದ್ದು, ಈ ಸ್ಮಾರಕಗಳ ರಕ್ಷಣೆ ಮಾಡಬೇಕು. ಚಲ್ಲಾಪಿಲ್ಲಿಯಾಗಿ ಬಿದ್ದಿರುವ ಮೂರ್ತಿಶಿಲ್ಪ, ಸ್ಮಾರಕ ಶಿಲ್ಪಗಳನ್ನು ಒಂದೆಡೆ ಸಂಗ್ರಹಿಸಿ ವಸ್ತು ಸಂಗ್ರಹಾಲಯ ನಿರ್ಮಿಸಬೇಕು.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ರಂಜಾನ್‌ ಸಂಭ್ರಮಕ್ಕೆ ಅಡ್ಡಿಯಾದ ಸಿಲಿಂಡರ್‌ ಕೊರತೆ; ದುಬಾರಿಯಾದ ಸಮೋಸ!

    March 17, 2026

    ಮಾ.25ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಒಳಮೀಸಲಾತಿ ವರದಿ ವಿರೋಧಿಸಿ ಛಲವಾದಿ ಮಹಾಸಭಾ ಕರೆ

    March 16, 2026

    ತುಮಕೂರಿನಲ್ಲಿ ಟೆನಿಸ್, ಶೂಟಿಂಗ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ: ಕಾರ್ಯಕ್ರಮ ಮುಂದೂಡಿ ಅಪಘಾತ ಸ್ಥಳಕ್ಕೆ ತೆರಳಿದ ಗೃಹಸಚಿವರು

    March 16, 2026

    Leave A Reply Cancel Reply

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಿರಾದಲ್ಲಿ LPG ಸಿಲಿಂಡರ್ ಅಭಾವ: ಹಬ್ಬದ ಸಂಭ್ರಮದ ನಡುವೆ ಗ್ರಾಹಕರಿಗೆ ಬಿಸಿ

    March 18, 2026

    ಶಿರಾ: ತಾಲ್ಲೂಕಿನ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ತೀವ್ರ ಅಭಾವ ಸೃಷ್ಟಿಯಾಗಿದ್ದು, ಯುಗಾದಿ ಮತ್ತು ರಂಜಾನ್…

    ಮಹನೀಯರ ಜಯಂತಿ ಅದ್ದೂರಿ ಆಚರಣೆ: ಬಳ್ಳಾರಿ ಎಡಿಸಿ ಮಹಮ್ಮದ್ ಝುಬೇರ್ ಎನ್. ಹೇಳಿಕೆ

    March 17, 2026

    ಬಳ್ಳಾರಿ:  SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ

    March 17, 2026

    ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ ಒದಗಿಸಲು ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ

    March 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.