ತುಮಕೂರು: ಮಹಾನಗರಪಾಲಿಕೆಯ 2025–26ನೇ ಸಾಲಿನ ಆಯವ್ಯಯ ಸಿದ್ಧಪಡಿಸುವ ಕುರಿತು ಫೆಬ್ರವರಿ 28ರಂದು ಮಧ್ಯಾಹ್ನ 3:30 ಗಂಟೆಗೆ ಮಹಾನಗರಪಾಲಿಕೆ ಸಭಾಂಗಣದಲ್ಲಿ 2ನೇ ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ.
ಮಹಾನಗರಪಾಲಿಕೆ ವ್ಯಾಪ್ತಿಯ ಸಂಘ ಸಂಸ್ಥೆಗಳ ಪದಾಧಿಕಾರಿ, ಹೋಟೆಲ್ ಅಸೋಸಿಯೇಷನ್, ಛತ್ರಗಳ ಮಾಲೀಕರ ಸಂಘ, ಸಿನಿಮಾ ಮಂದಿರಗಳ ಮಾಲೀಕರ ಸಂಘ, ಶಿಕ್ಷಣ ಸಂಸ್ಥೆಯ ಸಂಘಗಳ ಸಂಘ, ನರ್ಸಿಂಗ್ ಹೋಮ್ಸ್ ಸಂಘಗಳ ಪದಾಧಿಕಾರಿ, ವಕೀಲರ ಅಸೋಸಿಯೇಷನ್, ನಾಗರಿಕ ಹಿತರಕ್ಷಣಾ ಸೇವಾ ಸಮಿತಿ, ಸರ್ಕಾರೇತರ ಸಂಘ ಸಂಸ್ಥೆ, ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಭೆಗೆ ಹಾಜರಾಗಿ ಸಲಹೆ/ಸೂಚನೆಗಳನ್ನು ನೀಡಿ, ಆಯವ್ಯಯವನ್ನು ಪ್ರಗತಿಶೀಲವಾಗಿ ರೂಪಿಸಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4