nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಡಿ.14ರಂದು ರಾಷ್ಟ್ರೀಯ ಲೋಕ್ ಆದಾಲತ್ : ಬಿ.ಜಯಂತ್ ಕುಮಾರ್
    ತುಮಕೂರು November 25, 2024

    ತುಮಕೂರು: ಡಿ.14ರಂದು ರಾಷ್ಟ್ರೀಯ ಲೋಕ್ ಆದಾಲತ್ : ಬಿ.ಜಯಂತ್ ಕುಮಾರ್

    By adminNovember 25, 2024No Comments2 Mins Read
    lok adalath

    ತುಮಕೂರು:  ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದುಕೊಂಡಿರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸುವ ಉದ್ದೇಶದಿಂದ ಡಿಸೆಂಬರ್ 14ರಂದು ರಾಷ್ಟ್ರೀಯ ಲೋಕ್ ಆದಾಲತ್ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ್ ಕುಮಾರ್ ತಿಳಿಸಿದರು.

    ನಗರದ ಜಿಲ್ಲಾ ನ್ಯಾಯಾಲಯದ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಶನಿವಾರ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ನ್ಯಾಯಾಲಯಗಳಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು ಕಡಿಮೆ ಮಾಡುವುದು ಮತ್ತು ಸಾರ್ವಜನಿಕರು ನ್ಯಾಯಾಲಯಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಲೋಕ್ ಆದಾಲತ್‌ ಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.


    Provided by
    Provided by

    ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ನಡೆದ ಲೋಕ್ ಆದಾಲತ್‌ನಲ್ಲಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 96,494 ಪ್ರಕರಣಗಳ ಪೈಕಿ 9,082 ಪ್ರಕರಣಗಳನ್ನು ಹಾಗೂ 1,13,000 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು.

    ಲೋಕ್ ಅದಾಲತ್‌ ನಲ್ಲಿ ಜನಸಾಮಾನ್ಯರಿಗೆ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜೀ ಸಂಧಾನದ ಮೂಲಕ ಎಲ್ಲಾ ರೀತಿಯ ರಾಜಿಯಾಗಬಹುದಾದ ವ್ಯಾಜ್ಯ ಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಈ ಲೋಕ್ ಅದಾಲತ್‌ ನಲ್ಲಿ ಅತೀ ಶೀಘ್ರವಾಗಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

    ನಂತರ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಅವರು, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜಿಯಾಗಬಹುದಾದ ಅಪರಾಧಿಕ ಪ್ರಕರಣ, ಚೆಕ್ಕು ಅಮಾನ್ಯ, ಬ್ಯಾಂಕ್, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕಾರ್ಮಿಕ ವಿವಾದ, ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮು, ವಿದ್ಯುತ್ ಹಾಗೂ ನೀರಿನ ಶುಲ್ಕ, ವೈವಾಹಿಕ / ಕುಟುಂಬ ನ್ಯಾಯಾಲಯ ಪ್ರಕರಣ(ವಿಚ್ಛೇದನ ಪ್ರಕರಣ ಹೊರತುಪಡಿಸಿ)ಗಳು, ಭೂಸ್ವಾಧೀನ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ, ಕಂದಾಯ ಪ್ರಕರಣ (ಜಿಲ್ಲಾ ಹಾಗೂ ಉಚ್ಛ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮಾತ್ರ), ಸಿವಿಲ್ ಪ್ರಕರಣ(ಬಾಡಿಗೆ, ಅನುಭೋಗದ ಹಕ್ಕುಗಳು ನಿರ್ಬಂಧಕಾಜ್ಞೆ ದಾವೆಗಳು ಹಾಗೂ ಇತರೆ ದಾವೆಗಳು)ಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು.

    ಕಾನೂನು ಸೇವಾ ಪ್ರಾಧಿಕಾರದಿಂದ ಪ್ರಸಕ್ತ ವರ್ಷದಲ್ಲಿ 3 ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಹಮ್ಮಿಕೊಂಡಿದ್ದು ಈವರೆಗೆ ಕೌಟುಂಬಿಕ ಕಲಹಗಳಿಂದ ವಿಚ್ಛೇದನಕ್ಕಾಗಿ ದಾಖಲಿಸಿದ್ದ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ 75ಕ್ಕೂ ಹೆಚ್ಚು ದಂಪತಿಗಳ ಪುನರ್ಮಿಲನಕ್ಕೆ ಅವಕಾಶ ಮಾಡಿಕೊಡಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳ ವಿಲೇವಾರಿಯಲ್ಲಿ ರಾಜ್ಯದ ಮೊದಲ 5 ಸ್ಥಾನಗಳನ್ನು ಪಡೆದುಕೊಂಡಿರುವ ಜಿಲ್ಲೆಗಳಲ್ಲಿ ತುಮಕೂರು ಜಿಲ್ಲೆಯೂ ಒಂದು ಎಂದು ತಿಳಿಸಿದರು.

    ಪ್ರತೀದಿನ ಜಿಲ್ಲೆಯ ಎಲ್ಲಾ ನ್ಯಾಯಲಯಗಳಲ್ಲಿ ಲೋಕ್ ಅದಾಲತ್‌ ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‌ ಗಳು ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಕಚೇರಿ ದೂರವಾಣಿ ಸಂಖ್ಯೆ 0816-2255133 ಹಾಗೂ ಮೊ.ಸಂ. 9141193959ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ…

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.