ತುಮಕೂರು: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ (Pre-Metric) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ (State Hostel Portal) ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 15
ಅಧಿಕೃತ ವೆಬ್ ಸೈಟ್: https://shp.karnataka.gov.in
ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವರ್ಗದ ವಿದ್ಯಾರ್ಥಿಗಳಿಗೆ ಶೇ. 75 ರಷ್ಟು ಸ್ಥಾನಗಳು ಮೀಸಲಿವೆ.
ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಹಾಗೂ ಇತರೆ ಹಿಂದುಳಿದ ವರ್ಗಗಳ (OBC) ವಿದ್ಯಾರ್ಥಿಗಳಿಗೆ ಶೇ. 25 ರಷ್ಟು ಸ್ಥಾನಗಳನ್ನು ಕಾಯ್ದಿರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು-572102.
ದೂರವಾಣಿ ಸಂಖ್ಯೆ: 0816–2273724
ಇಲಾಖೆಯ ನಿಯಮಾವಳಿಗಳ ಪ್ರಕಾರ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


