nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ

    September 4, 2026

    ತುಮಕೂರು: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 4, 2026

    ತುಮಕೂರು:  ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ

    September 4, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ
    • ತುಮಕೂರು: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ತುಮಕೂರು:  ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ
    • ಬಳ್ಳಾರಿ: ಗ್ರಾಮ ಒನ್ ಫ್ರಾಂಚೈಸಿ ನೇಮಕಾತಿಗೆ ಅರ್ಜಿ ಆಹ್ವಾನ
    • ತಿಪಟೂರು ಬಿಜೆಪಿ ಟಿಕೆಟ್ ವಿಚಾರ ಪ್ರಸ್ತಾಪ ಅಪ್ರಸ್ತುತ: ಶ್ರೀ ರುದ್ರಮುನಿಸ್ವಾಮೀಜಿ
    • ವಿದೇಶದಲ್ಲಿ ಉನ್ನತ ವ್ಯಾಸಂಗ: ಹೊಳೆನರಸೀಪುರದಲ್ಲಿ ‘ವಿದೇಶದಲ್ಲಿ ಅಧ್ಯಯನ 2026’ ಕಾರ್ಯಕ್ರಮದ ಪ್ರಚಾರಕ್ಕೆ ಚಾಲನೆ
    • ನಿವೇಶನ ವಿತರಣೆಗೆ ಕ್ರಮ ಕೈಗೊಳ್ಳಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆ.ಎನ್.ರಾಜಣ್ಣ ಸೂಚನೆ
    • ಮಧುಗಿರಿ: ಸಂಬಳ ಬಿಡುಗಡೆಯಾಗದ ಸಂಕಷ್ಟದಲ್ಲಿ 10 ಗ್ರಾ.ಪಂ. ನೌಕರರು: ಜೀವನ ನಡೆಸಲು ಪರದಾಡುವ ಸ್ಥಿತಿ ನಿರ್ಮಾಣ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ
    ಗುಬ್ಬಿ September 4, 2026

    ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ

    By Ganesh TumkuruSeptember 4, 2026No Comments2 Mins Read
    shubha kalyan

    ಗುಬ್ಬಿ: ಒಂದೇ ಸೂರಿನಡಿ ಸಾರ್ವಜನಿಕರ ಅರ್ಜಿಗೆ ಸ್ಥಳದಲ್ಲೇ ಉತ್ತರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಆರಂಭಿಸಿರುವ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ಯಶಸ್ಸಿಗೆ ಪಟ್ಟಣದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ತಿಳಿಸಿದರು.

    ಅವರು ಪಟ್ಟಣದ ಡಾ.ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಸೆ.5 ರಂದು ನಡೆಯುವ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಕ್ಕೆ ಅವಶ್ಯ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿ, ಸಾರ್ವಜನಿಕರಿಗೆ ಮೂಲಭೂತ ಸವಲತ್ತು ಜೊತೆಗೆ ಇಲಾಖಾವಾರು ಸ್ಟಾಲ್‌ ಮೂಲಕ ಅರ್ಜಿ ಸ್ವೀಕಾರ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

    ತಾಲ್ಲೂಕಿನಾದ್ಯಂತ ಸಾರ್ವಜನಿಕರಿಗೆ ಕಾರ್ಯಕ್ರಮ ಕುರಿತು ಪ್ರಚಾರ ಕಾರ್ಯ ಮಾಡಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿ ಹಾಗೂ ಸ್ಥಳೀಯ ಪಟ್ಟಣ ಪಂಚಾಯಿತಿ ಮೂಲಕ ಜನರಿಗೆ ಆಂದೋಲನ ಬಗ್ಗೆ ತಿಳಿಸಲಾಗಿದೆ. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹಾಗೂ ಶಾಸಕ ಎಸ್‌.ಆರ್‌. ಶ್ರೀನಿವಾಸ್‌ ಉಪಸ್ಥಿತರಿದ್ದು, ಅರ್ಜಿ ಆಹವಾಲು ಸ್ವೀಕರಿಸಲಿದ್ದಾರೆ. ಸ್ಥಳದಲ್ಲೇ ಅರ್ಜಿಗೆ ಉತ್ತರ ಸಿಗಲಿದೆ. ಇಲ್ಲವಾದಲ್ಲಿ ಮೂರು ಹಂತದಲ್ಲಿ ಅಂದರೆ ತಹಸೀಲ್ದಾರ್‌, ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಮೂಲಕ ಅರ್ಜಿ ಇತ್ಯರ್ಥಗೊಳಲಿದೆ ಎಂದರು.

    ಸಾರ್ವಜನಿಕರು ಈ ಆಂದೋಲನಕ್ಕೆ ಬಂದು ತಮ್ಮ ಅರ್ಜಿಯನ್ನು ಸಂಬಂಧಪಟ್ಟ ಇಲಾಖೆಗೆ ಸಲ್ಲಿಸಿ ಟೋಕನ್‌ ಪಡೆಯಬೇಕಿದೆ. ನಂತರ ಡಿಎಸಿ ಅವರ ನೇತೃತ್ವದ ಸಭೆಯಲ್ಲಿ ಅರ್ಜಿ ಬಗ್ಗೆ ಚರ್ಚೆ ಕೂಡ ಮಾಡಲಾಗುತ್ತದೆ. ಕಾರ್ಯಕ್ರಮಕ್ಕೆ ಬರದಿದ್ದಲ್ಲಿ ತಮ್ಮ ಹತ್ತಿರದ ಗ್ರಾಮ ಒನ್‌ ಅಥವಾ ಕರ್ನಾಟಕ ಒನ್‌ ಮೂಲಕ ಆನ್‌ ಲೈನ್‌ ಅರ್ಜಿ ಸಲ್ಲಿಸಬಹುದಾಗಿದೆ. ಮೂರು ದಿನದಲ್ಲಿ ಉತ್ತರ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

    ಇದನ್ನೂ ಓದಿ: ತುಮಕೂರು: ಗೊಲನ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ

    ಈ ಸಂದರ್ಭದಲ್ಲಿ ತಹಸೀಲ್ದಾರ್‌ ಆರತಿ. ಬಿ., ತಾಪಂ ಇಒ ರಂಗನಾಥ್‌, ಪಪಂ ಮುಖ್ಯಾಧಿಕಾರಿ ಮಂಜುಳಾ ದೇವಿ, ಬಿಇಒ ನಟರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವೀಣಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಪವಿತ್ರ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಜಗನ್ನಾಥ್‌ ಗೌಡ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

    ಪ್ರಜಾ ಸೇವೆ ಆಂದೋಲನದಲ್ಲಿ ಜನತೆ ಸಮಸ್ಯೆ ಬಗೆಹರಿಸಿಕೊಳ್ಳಿ; ಪ್ರಜಾ ಸೇವೆ ಆಂದೋಲನದಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿರುತ್ತಾರೆ. ಜಿಲ್ಲೆಯಾದ್ಯಂತ ನಿರಂತರ ಈ ಪ್ರಜಾ ಸೇವೆ ಆಂದೋಲನ ಪ್ರತಿ ಶನಿವಾರ ಸ್ಥಳೀಯ ಶಾಸಕರ ನೇತೃತ್ವದಲ್ಲಿ ನಡೆಯಲಿದೆ. ಹೋಬಳಿ ಮಟ್ಟದಲ್ಲಿ ಕೂಡ ನಡೆಯುವ ಈ ಕಾರ್ಯಕ್ರಮ ಬಳಸಿಕೊಂಡು ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ತಿಳಿಸಿದರು.

    ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು, ಕಾರ್ಯಕ್ರಮಗಳು ಅನುಷ್ಠಾನದಲ್ಲಿ ವಿಳಂಬ ಆಗದಂತೆ ಕ್ರಮ ಕೈಗೊಳ್ಳುವ ಈ ಸಾರ್ವಜನಿಕ ಆಂದೋಲನ ಕಾರ್ಯಕ್ರಮದಲ್ಲಿ ಆಧಾರ್‌ ಕಾರ್ಡ್‌ ಸಮಸ್ಯೆ ಬಗೆಹರಿಸಿಕೊಳ್ಳಲು ವಿಶೇಷ ಮೊಬೈಲ್‌ ಆಧಾರ್‌ ಕೌಂಟರ್‌ ತೆರೆಯಲಾಗುತ್ತದೆ. ಪ್ರಜಾ ಸೇವೆ ಆಂದೋಲನ ಯಶಸ್ಸಿ ಗೆ ಸಕಲ ಸಿದ್ಧತೆಯನ್ನು ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಮಾಡಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು.

    -ಶುಭ ಕಲ್ಯಾಣ್‌, ಜಿಲ್ಲಾಧಿಕಾರಿಗಳು.


     

    Ganesh Tumkuru
    • Website

    Related Posts

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    July 20, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ

    September 4, 2026

    ಗುಬ್ಬಿ: ಒಂದೇ ಸೂರಿನಡಿ ಸಾರ್ವಜನಿಕರ ಅರ್ಜಿಗೆ ಸ್ಥಳದಲ್ಲೇ ಉತ್ತರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಆರಂಭಿಸಿರುವ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ…

    ತುಮಕೂರು: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 4, 2026

    ತುಮಕೂರು:  ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ

    September 4, 2026

    ಬಳ್ಳಾರಿ: ಗ್ರಾಮ ಒನ್ ಫ್ರಾಂಚೈಸಿ ನೇಮಕಾತಿಗೆ ಅರ್ಜಿ ಆಹ್ವಾನ

    September 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.