ತುಮಕೂರು: ಕರ್ನಾಟಕ ಲೋಕಸೇವಾ ಆಯೋಗವು 2026ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯನ್ನು ಜಿಲ್ಲಾ ಕೇಂದ್ರಗಳಲ್ಲಿ ಜುಲೈ 17 ರಿಂದ 19ರವರೆಗೆ ನಡೆಸಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷ ಹಾಗೂ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆಯು ಜುಲೈ 17, 18 ಹಾಗೂ 19ರಂದು ಬೆಳಿಗ್ಗೆ 9.30 ರಿಂದ ಸಂಜೆ 4.30 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘಿಸಿದವರನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


