ತುಮಕೂರು: ಅಂತರಸನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ FITWEL TOOLS AND FORGINGS PRIVATE LIMITED ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮವನ್ನು ಸೋಮವಾರ ಮಧ್ಯಾಹ್ನ ಆಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪುರುಷೋತ್ತಮ್ ಹಾಗೂ ಹೆಚ್ಚುವರಿ ಪೊಲೀಸ್ ಅಧಿಕಾರಿ ಗೋಪಾಲ್ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿ, ಸಂಚಾರ ನಿಯಮ ಪಾಲನೆಯ ಅವಶ್ಯಕತೆ, ರಸ್ತೆ ಸುರಕ್ಷತೆಯ ಜವಾಬ್ದಾರಿ ಹಾಗೂ ಅಪಘಾತ ತಡೆ ಕುರಿತ ಸಂದೇಶ ನೀಡಿದರು.
ಕಂಪನಿಯ ಮ್ಯಾನೇಜರ್ ಧನಂಜಯ್ ಎಂ. ಅವರು ಸಂಸ್ಥೆ ಸದಾ ತನ್ನ ಕಾರ್ಮಿಕರ ಹಿತಾಸಕ್ತಿಗೆ ಬದ್ಧವಾಗಿದೆ ಎಂದು ತಿಳಿಸಿದರು.
ಕಂಪನಿಯ ಮಾಲೀಕರಾದ ಅನಂತ್ ಡಿ.ಎಸ್. ಅವರು CSR ನಿಧಿಯಡಿ 10 ಬ್ಯಾರಿಕೇಡ್ ಗಳು ಹಾಗೂ ಸೋಲಾರ್ ಬ್ಲಿಂಕರ್ ಲೈಟ್ ಗಳನ್ನು ಜಿಲ್ಲಾ ಪೊಲೀಸ್ ಇಲಾಖೆಗೆ ಹಸ್ತಾಂತರಿಸಿದರು. ಸಂಚಾರ ಅಪಘಾತಗಳನ್ನು ತಡೆಯಲು ಈ ನೆರವು ಮಹತ್ವದ್ದೆಂದು ಪೊಲೀಸರು ಪ್ರಶಂಸೆ ವ್ಯಕ್ತಪಡಿಸಿದರು.
ಪ್ರತಿದಿನ ಸುಮಾರು ಸಾವಿರಕ್ಕೂ ಹೆಚ್ಚು ಕಾರ್ಮಿಕರು ಸಂಚರಿಸುವ ಕರ್ನಾಟಕ ಹ್ಯಾಂಡ್ ಟೂಲ್ಸ್ ಕಾಂಪ್ಲೆಕ್ಸ್ ಪ್ರದೇಶದಲ್ಲಿ ಈ ಕ್ರಮಗಳು ರಸ್ತೆ ಸುರಕ್ಷತೆಯನ್ನು ಬಲಪಡಿಸಲಿವೆ ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC