ತುಮಕೂರು: ಲಂಚ ಪಡೆಯುತ್ತಿದ್ದ ವೇಳೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಚೇತನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ವರದಿಗಳ ಪ್ರಕಾರ, ಠಾಣೆಯ ವಶದಲ್ಲಿ ಇದ್ದ ವಾಹನ ಒಂದನ್ನು ಬಿಡುಗಡೆಗಾಗಿ ಪೊಲೀಸ್ ಸಬ್ ಇನ್ಸೆಕ್ಟರ್ ಚೇತನ್ ರವರು ಬೆಂಗಳೂರು ಮೂಲದ ವಕೀಲರೊಬ್ಬರಿಗೆ 40,000 ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಾಗಾಗಿ ವಕೀಲರು ಲೋಕಾಯುಕ್ತ ಪೊಲೀಸರ ಮೊರೆ ಹೋದ ಕಾರಣ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರವರು ಲೋಕಾಯುಕ್ತ ಟ್ರ್ಯಾಪ್ ಬಿದ್ದಿದ್ದಾರೆ.
ಕಳೆದ ರಾತ್ರಿ 11:30 ಸಂದರ್ಭದಲ್ಲಿ ತುಮಕೂರಿನ ಕ್ಯಾತ್ಸಂದ್ರ ಬಳಿಯ ನಮಸ್ತೆ ತುಮಕೂರು ಹೊಟೇಲ್ ಬಳಿ ರೂ. 40,000 ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಇದೇ ಸಂದರ್ಭದಲ್ಲಿ ಪಿಎಸ್ ಐ ಚೇತನ್ ಹಾಗೂ ಹೋಟೆಲ್ ನ ಸಿಬ್ಬಂದಿ ಒಬ್ಬರು ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ರೆಡ್ ಹ್ಯಾಂಡಾಗಿ ಬಲೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ತುಮಕೂರು ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


