ತುಮಕೂರು: ಹಿರಿಯ ಮುತ್ಸದ್ದಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಹೆಚ್.ಪಟೇಲ್ ಅವರ 25ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಜೆ.ಹೆಚ್.ಪಟೇಲ್ ಪ್ರತಿಷ್ಠಾನದ ವತಿಯಿಂದ ಡಿಸೆಂಬರ್ 12 ರಂದು ಮಧ್ಯಾಹ್ನ 3 ಗಂಟೆಗೆ ಕೋಲಾರದ ಕನ್ನಡ ಭವನ ಸ್ಯಾನಿಟೋರಿಯಂನಲ್ಲಿ ‘ಕುವ್ಯವಸ್ಥೆಯಿಂದ ಸುವ್ಯವಸ್ಥೆಯೆಡೆಗೆ’ ಎಂಬ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ ಎಂದು ಜೆಡಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಆರ್.ರಂಗನಾಥ್ ತಿಳಿಸಿದ್ದಾರೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ನಾಗಲಾಪುರ ಮಠದ ಶ್ರೀತೇಜೇಶಲಿಂಗ ಶಿವಾಚಾರ್ಯ ಸ್ವಾಮೀಜಿ ಗಳು ವಹಿಸಲಿದ್ದು, ವಿಧಾನಸಭಾ ಮಾಜಿ ಸ್ಪೀಕರ್ ಕೆ.ಆರ್.ರಮೇಶಕುಮಾರ್ ಕಾರ್ಯಕ್ರಮ ಉದ್ಘಾಟಿಸ ಲಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ನಿಕಟಪೂರ್ವ ನ್ಯಾಯಾಧೀಶರಾದ ವಿ.ಗೋಪಾಲಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ.ಶ್ರೀನಿವಾಸಗೌಡ, ಲೋಕಸಭಾ ಸದಸ್ಯ ಎಂ. ಮಲ್ಲೇಶಬಾಬು, ಮಾಜಿ ಸಭಾಪತಿ ಆರ್.ವಿ.ಸುದರ್ಶನ್, ಶಾಸಕರಾದ ಕೊತ್ತೂರು ಜಿ.ಮಂಜುನಾಥ್, ವಕೀಲರಾದ ಸಿ.ಎಸ್.ದ್ವಾರಕನಾಥ್, ಮಾಜಿ ಶಾಸಕರಾದ ಎಂ.ನಾರಾಯಣಸ್ವಾಮಿ, ಜೆ.ಹೆಚ್.ಪಟೇಲ್ ಪ್ರತಿಷ್ಠಾನದ ಅಧ್ಯಕ್ಷರಾದ ತ್ರಿಶೂಲಪಾಣಿ ಜೆ.ಹೆಚ್.ಪಟೇಲ್, ವ್ಯವಸ್ಥಾಪಕ ಧರ್ಮದರ್ಶಿ ಮಾಜಿ ಶಾಸಕರಾದ ಮಹಿಮ ಜೆ.ಪಟೇಲ್, ಧರ್ಮದರ್ಶಿ ಟಿ.ಪ್ರಭಾಕರ್ ಅವರುಗಳು ಭಾಗವಹಿಸಲಿದ್ದು, ಜೆ.ಹೆಚ್ .ಪಟೇಲ್ ಅಭಿಮಾನಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಆರ್. ಜೆಡಿಯು ರಂಗನಾಥ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


