ತುಮಕೂರು: ಚಲಿಸುತ್ತಿದ್ದ ರೈಲಿನಲ್ಲಿ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಸತ್ಯ ಸಿ.ಎ., ಅಲಿಯಾಸ್ ಮೊಟ್ಟೆ (28) ಎಂಬಾತನಿಗೆ ಪೋಕ್ಸೋ 1 ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಹಾಗೂ 2 ಸಾವಿರ ರೂ. ದಂಡ ವಿಧಿಸಿದೆ.
ಅಪರಾಧಿ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಚಾಮನಹಳ್ಳಿ ನಿವಾಸಿ. ಬಾಲಕಿ ರೈಲಿನಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದು, ಇದೇ ರೈಲಿನಲ್ಲಿ ಅಪರಾಧಿ ಸತ್ಯ ಕೂಡಾ ಪ್ರಯಾಣಿಸುತ್ತಿದ್ದ. ರೈಲಿನಲ್ಲಿಯೇ ಈತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಆರೋಪದ ಮೇಲೆ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಮೈಸೂರು ವೃತ್ತದ ರೈಲ್ವೆ ಇನ್ಸ್‌ಪೆಕ್ಟರ್ ಎಲ್. ಶ್ರೀನಿವಾಸ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪೋಕ್ಸೋ 1 ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕಾಶ್ ಎಸ್.ಹೆಳವರ ಅವರು ಪ್ರಕರಣದ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ.
ನೊಂದ ಬಾಲಕಿಗೆ 53 ಸಾವಿರ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚಿಸಿದ್ದಾರೆ. ಸರ್ಕಾರದ ಪರವಾಗಿ ಹನುಮಂತರಾಯ ಅವರು ವಾದ ಮಂಡಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


