nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ

    June 12, 2026

    ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ

    June 12, 2026

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    June 12, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    • ಪಾವಗಡದಲ್ಲಿ ಬಾಕಿ ವಿದ್ಯುತ್ ಬಿಲ್ ವಸೂಲಿ ಆಂದೋಲನ: ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಎಚ್ಚರಿಕೆ
    • ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ
    • ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ
    • ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು:  SUCI ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಎಸ್.ಎನ್.ಸ್ವಾಮಿ
    ತುಮಕೂರು April 6, 2024

    ತುಮಕೂರು:  SUCI ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಎಸ್.ಎನ್.ಸ್ವಾಮಿ

    By adminApril 6, 2024No Comments2 Mins Read

    ತುಮಕೂರು: ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಇಂದು ನಾಮಪತ್ರ ಸಲ್ಲಿಸಲಾಯಿತು. ನಗರದ ಟೌನ್ ಹಾಲ್ ನಿಂದ ಮೆರವಣಿಗೆಯಲ್ಲಿ ತೆರಳಿ ಎಸ್‌ ಯುಸಿಐ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ, ರೈತರು,ಕಾರ್ಮಿಕರು ದುಡಿಯುವ ಜನಗಳ ಸಮಸ್ಯೆಗಳ ಧ್ವನಿಯನ್ನು ಸಂಸತ್ತಿನಲ್ಲಿ ಚರ್ಚಿಸಲು ಎಸ್.ಎನ್.ಸ್ವಾಮಿಯವರನ್ನು ಬೆಂಬಲಿಸಿ, ಎಸ್‌ಯುಸಿಐ ಪಕ್ಷವನ್ನು ಬಲಪಡಿಸಿ ಎಂಬ ಘೋಷಣೆಗಳೊಂದಿಗೆ ಕಾರ್ಯಕರ್ತರು ಕೂಗುತ್ತ ಮೆರವಣಿಗೆ ನಡೆಸಿದರು.

    ಮೆರವಣಿಗೆಗೆ ಮುಂಚೆ ಮಾತನಾಡಿದ ಅಭ್ಯರ್ಥಿ ಎಸ್.ಎನ್.ಸ್ವಾಮಿ,  ಸಮಾಜದಲ್ಲಿ ಬಡವರು ಶ್ರೀಮಂತರ ನಡುವಿನ ಅಂತರ ಹೆಚ್ಚುತ್ತಿದೆ. ನಮ್ಮನ್ನು ಆಳುತ್ತಿರುವ ಪಕ್ಷಗಳು ಬಂಡವಾಳ ಶಾಹಿಗಳ ಶ್ರೀಮಂತ ಮನೆತನಗಳ ಲಾಭವನ್ನು ಹೆಚ್ಚಿಸುತ್ತಿವೆ. ದೇಶದಲ್ಲಿ ಜನರು ಬೆಲೆ ಏರಿಕೆ ನಿರುದ್ಯೋಗದಂಥ ಸಮಸ್ಯೆಗಳನ್ನು ತೀರ್ವವಾಗಿ ಎದುರಿಸುತ್ತಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಎಡಪಂಥೀಯ ಸಿಪಿಐ, ಸಿಪಿಐಎಂ ಪಕ್ಷಗಳು ಕೆಲವೊಂದು ಸೀಟುಗಳ ಲಾಭಕ್ಕಾಗಿ ಚುನಾವಣಾ ರಾಜಕೀಯದಲ್ಲಿ ಮುಳುಗಿವೆ. ಕಮ್ಯುನಿಸ್ಟ್ ವಿಚಾರಕ್ಕೆ ಕಾರ್ಮಿಕರನ್ನು ಸಜ್ಜುಗೊಳಿಸಬೇಕಾಗಿದ್ದ ಆ ಪಕ್ಷಗಳು ಇಂಡಿಯಾ ಮೈತ್ರಿ ಕೂಟಕ್ಕೆ ಬೆಂಬಲ ಸೂಚಿಸಿವೆ. ಆದ್ದರಿಂದ ಈ ಚುನಾವಣೆಯಲ್ಲಿ ನಮ್ಮ ಪಕ್ಷವು ತನ್ನ ಶಕ್ತಿ ಸಾಮಥ್ಯಕ್ಕೆ  ತಕ್ಕಂತೆ ಬಲವಾದ ಪರಿಣಾಮ ಬೀರಲು ಏಕಾಂಗಿಯಾಗಿ 19 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ನನ್ನನ್ನು ನಿಲ್ಲಿಸಿದ್ದು ಪ್ರಜ್ಞಾವಂತ, ವಿಚಾರಂತ ದುಡಿಯುವ ಜನರು ನಮ್ಮ ಪಕ್ಷದ  ಅಭ್ಯರ್ಥಿಗಳಿಗೆ ಮತಹಾಕಿ ಗೆಲ್ಲಿಸಬೇಕೆಂದು ಮನವಿ ಮಾಡಿದರು.


    Provided by
    Provided by

    ಮೆರವಣಿಗೆ ಮಧ್ಯೆ  ಅವರು ಸ್ವಾತಂತ್ರ ಚೌಕದಲ್ಲಿನ ಹುತಾತ್ಮರ ಸ್ಥಂಭಕ್ಕೆ ಮಾಲಾರ್ಪಣೆ ಮಾಡಿ ಸ್ವಾತಂತ್ರ ಹೋರಾಟಗಾರರ ಕನಸನ್ನು ನನಸು ಮಾಡುವುದು ಅವರ ಆಶಯಗಳನ್ನು ಪೂರ್ಣಗೊಳಿಸಲು ಮತ್ತು ನಮ್ಮ ಪಕ್ಷವು ದುಡಿಯುವ ಜನರ ಸರ್ವಾಧಿಕಾರವನ್ನು ತರಲು ಶ್ರಮಿಸುತ್ತದೆ ಎಂದು ತಿಳಿಸಿದರು.

    ಪಕ್ಷ ರಾಜ್ಯ ನಾಯಕರಾದ ಕೆ.ವಿ.ಭಟ್ ಅವರು ಅಭ್ಯರ್ಥಿಗೆ ಶುಭಕೋರಿ ಮಾತನಾಡಿ, ನಮ್ಮ ಪಕ್ಷವು ಜನರ ಸಮಸ್ಯೆಗಳ ಬಗ್ಗೆ ಹೋರಾಟ ಕಟ್ಟುತ್ತಿದೆ. ಜನರ ನಡುವೆ ಇದ್ದು ಹಲವಾರು ಚಳುವಳಿಗೆ ನಾಯಕತ್ವ ನೀಡಿ ತುಮಕೂರಿನಲ್ಲಿ ಪಕ್ಷದ ಜವಾಬ್ದಾರಿ ಹೊತ್ತಿರುವ ಎಸ್.ಎನ್. ಸ್ವಾಮಿಯವರು ಜನರ ನೈಜ ಸಮಸ್ಯೆಗಳಿಗೆ ಸ್ಪಂದಿಸುವವರು. ಅವರು ಸೂಕ್ತವಾದ ಅಭ್ಯರ್ಥಿಯಾಗಿದ್ದಾರೆ. ತುಮಕೂರಿನ ನಾಕರಿಕರು ಅವರನ್ನು ಬೆಂಬಲಿಸುವ ಮೂಲಕ ಗೆಲ್ಲಿಸಬೇಕೆಂದು ಹೇಳಿದರು.

    ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಲೋಕಸಭಾ  ಚುನಾವಣಾಧಿಕಾರಿಗಳಾದ ಶುಭ ಕಲ್ಯಾಣ್ ಅವರಿಗೆ ಎಸ್‌ ಯುಸಿಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಎಸ್.ಎನ್.ಸ್ವಾಮಿಯವರು ನಾಮ ಪತ್ರ ಸಲ್ಲಿಸಿದರು.

    ಪಕ್ಷದ ರಾಜ್ಯ ನಾಯಕರಾದ ಹೆಚ್.ಪಿ.ಶಿವಪ್ರಕಾಶ್, ತುಮಕೂರು ಸಂಘಟನಾ ಸಮಿತಿಯ ಸದಸ್ಯರಾದ ಎಂ.ವಿ.ಕಲ್ಯಾಣಿ, ಮಂಜುಳ ಗೋನವಾರ, ಲೋಕೇಶ್ ಭೈರನಾಯಕನಹಳ್ಳಿ, ರತ್ನಮ್ಮ, ಅಶ್ವಿನಿ, ಪಾರ್ವತಮ್ಮ, ಪ್ರವೀಣ್, ಅಣ್ಣಪ್ಪ, ಪ್ರಶಾಂತ್, ಸೇರಿದಂತೆ ಹಲವಾರು ಜನ ಪಕ್ಷದ ಬೆಂಬಲಿಗರು ನಾಮಪತ್ರ ಸಲ್ಲಿಸುವ ಕಾರ್ಯಕ್ಕೆ ಸಾಕ್ಷಿಯಾದರು.

    ಪ್ರಚಾರಕ್ಕೆ ಚಾಲನೆ:

    SUCI ಕಮ್ಯುನಿಸ್ಟ್ ಪಕ್ಷದ ತುಮಕೂರು ಲೋಕಸಭಾ ಕ್ಷೇತ್ರ ಪ್ರಚಾರಕ್ಕೆ  ರಾಜ್ಯ ಸಮಿತಿ ಸೆಕ್ರೆಟರಿ ಸದಸ್ಯರಾದ ಕಾಮ್ರೆಡ್ ಎಂ.ಶಶಿಧರ್ ರವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ  ಅಭ್ಯರ್ಥಿಯಾದ ಎಸ್ ಎನ್ ಸ್ವಾಮಿರವರು ಉಪಸ್ಥಿತರಿದ್ದರು.

    ಬಳಿಕ ಮಾತನಾಡಿದ ಅವರು, ಎಲ್ಲಾ ಬಂಡವಾಳಶಾಹಿ ಪಕ್ಷಗಳನ್ನು ಸೋಲಿಸಿ ರೈತ ಕಾರ್ಮಿಕರ ಪಕ್ಷವಾದ ಎಸ್ ಯು ಸಿ ಐ ಪಕ್ಷದ ಅಭ್ಯರ್ಥಿಯಾದ ಎಸ್.ಎನ್. ಸ್ವಾಮಿಯವರನ್ನು ಚುನಾಯಿಸಿ ಗೆಲ್ಲಿಸುವ ಮೂಲಕ ಹೋರಾಟ ಪರ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ಪಕ್ಷದ ಸದಸ್ಯರು ಬೆಂಬಲಿಗರು ಈ ಸಂದರ್ಭದಲ್ಲಿ  ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ

    June 12, 2026

    ಪಾವಗಡ: ವೈದ್ಯನಾಗಬೇಕೆಂಬ ದೊಡ್ಡ ಕನಸು ಹೊತ್ತು ಬಿ.ಫಾರ್ಮಸಿ ವ್ಯಾಸಂಗ ಮಾಡುತ್ತಿದ್ದ ಯುವಕನೊಬ್ಬ ವಿಷಕಾರಿ ಹಾವು ಕಡಿತಕ್ಕೆ ತುತ್ತಾಗಿ, ಸಕಾಲಕ್ಕೆ ಸರಿಯಾದ…

    ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ

    June 12, 2026

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    June 12, 2026

    KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.