ತುಮಕೂರು: ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಲಾರಸ್ ಬಯೋ ಕಾರ್ಖಾನೆಯಲ್ಲಿ ನಡೆದ ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟಕದ ಮಾಲೀಕರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ ತಿಳಿಸಿದ್ದಾರೆ.
ಘಟಕದ ಸಂಪ್ ನಲ್ಲಿ ಉಸಿರುಕಟ್ಟಿ ಪ್ರತಾಪ್ ( 23), ವೆಂಕಟೇಶ್(32) ಮೃತ ಪಟ್ಟಿದ್ದರು. ಶಿರಾದ ರೂರು ಗ್ರಾಮದ ಮಂಜುನಾಥ್(42), ಯುವರಾಜ್ (32) ಅಸ್ವಸ್ಥಗೊಂಡಿದ್ದರು. ಮೃತಪಟ್ಟವರನ್ನು ಹಾಗೂ ಅಸ್ವಸ್ಥಗೊಂಡವರನ್ನು ಕಾರ್ಖಾನೆಯ ಸಿಬ್ಬಂದಿಗಳೇ ಪ್ರಥಮ ಚಿಕಿತ್ಸೆ ಕೊಡಿಸಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದರು. ಪ್ರತಾಪ್ ಮತ್ತು ವೆಂಕಟೇಶ್ ಅವರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಸರ್ಕಾರ ಆಸ್ಪತ್ರೆಯಲ್ಲಿ ವೈದ್ಯರು ದೃಢಪಡಿಸಿದ್ದರು ಎಂದು ಹೇಳಿದ್ದಾರೆ.
ಈ ಪ್ರಕರಣದ ಸಂಬಂಧ ಕಾರ್ಖಾನೆಯ ಸಿಬ್ಬಂದಿ ಹಾಗೂ ಮಾಲೀಕರ ವಿರುದ್ಧ ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW