ತುಮಕೂರು: ಜಿಲ್ಲೆಯಲ್ಲಿ 40 ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದು, ಅದರಲ್ಲಿ 19 ಮಾದರಿಗಳು ಕುಡಿಯಲು ಯೋಗ್ಯವಾಗಿಲ್ಲ ಎಂಬ ಆತಂಕಕಾರಿ ವರದಿ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ.
ಹೌದು… ತುಮಕೂರು ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲೂ ನೀರಿನ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅತಿ ಹೆಚ್ಚು ಕೊರಟಗೆರೆ ತಾಲ್ಲೂಕಿನಲ್ಲಿ 9, ಸಿರಾ 6, ತುಮಕೂರು 3, ಗುಬ್ಬಿ ತಾಲ್ಲೂಕಿನ 1 ಮಾದರಿ ಕುಡಿಯಲು ಯೋಗ್ಯವಿಲ್ಲ ಎಂಬ ವರದಿ ಬಂದಿದೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕುಡಿಯಲು ಯೋಗ್ಯವಲ್ಲದ ನೀರಿನ ಮೂಲಗಳಿಂದ ನೀರು ಸರಬರಾಜು ಮಾಡಬಾರದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದಲ್ಲಿ ಗುರುವಾರ ವಿಪತ್ತು ನಿರ್ವಹಣಾ ಸಭೆ ನಡೆಸಿದರು. ನಗರದ ಎಲ್ಲ ಸರ್ಕಾರಿ ವಿದ್ಯಾರ್ಥಿನಿಲಯಗಳು ಹಾಗೂ ಪ್ರಾಥಮಿಕ ಶಾಲೆಗಳಿಗೆ ಪೂರೈಕೆ ಮಾಡುವ ಕುಡಿಯುವ ನೀರನ್ನು ನಿಯಮಿತವಾಗಿ ಪರೀಕ್ಷೆಗೆ ಒಳಪಡಿಸುವಂತೆ ನಿರ್ದೇಶಿಸಿದರು.
ಜಿ.ಪಂ ಉಪಕಾರ್ಯದರ್ಶಿ ಸಂಜೀವಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಶಾರದಮ್ಮ, ತಿಪಟೂರು ಉಪವಿಭಾಗಾಧಿಕಾರಿ ಸಪ್ತಶ್ರೀ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC