ತುಮಕೂರು: ಜಿಲ್ಲೆಯ 17 ವರ್ಷದ ಯುವ ಪ್ರತಿಭೆ ಟಿ.ಎಸ್.ಪ್ರತೀಕ್ ಎಜೆಂಟಿಕ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (Agentic AI) ಕ್ಷೇತ್ರದಲ್ಲಿ ಸಾಧನೆ ಮಾಡಿ ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಗಳಿಸುವ ಮೂಲಕ ಜಿಲ್ಲೆಯ ಹೆಸರನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆರೆದಿದ್ದಾರೆ.
ತುಮಕೂರಿನ ನಿವಾಸಿಯಾದ ಈ ವಿದ್ಯಾರ್ಥಿ, ಇತ್ತೀಚೆಗೆ ನಡೆದ Agentic AI Hackathon ನಲ್ಲಿ ಭಾಗವಹಿಸಿ, ಸಂಪೂರ್ಣವಾಗಿ ಕಂಪ್ಯೂಟರ್ ಮೂಲಕ ಸ್ವತಂತ್ರವಾಗಿ AI ಏಜೆಂಟ್ ಅನ್ನು ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದ್ದಾರೆ. ಈ ವಿಶಿಷ್ಟ ತಂತ್ರಜ್ಞಾನಾಧಾರಿತ ಯೋಜನೆಗೆ ಜಾಗತಿಕ ಮಟ್ಟದಲ್ಲಿ ಗುರುತಿಸಿ, ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಮಾನ್ಯತೆ ಲಭಿಸಿದೆ.
AI ಏಜೆಂಟ್ ಸ್ವತಂತ್ರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದು, ನೈಜ ಜೀವನದಲ್ಲಿ ವಿವಿಧ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ವಿನ್ಯಾಸಗೊಳಿಸಲಾಗಿದೆ. ಇಷ್ಟು ಕಿರಿಯ ವಯಸ್ಸಿನಲ್ಲಿ ಇಂತಹ ಉನ್ನತ ಮಟ್ಟದ ತಾಂತ್ರಿಕ ಸಾಧನೆ ಮಾಡಿರುವುದು ತಜ್ಞರ ಮೆಚ್ಚುಗೆಗೆ ಪಾತ್ರವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


