ಬೆಂಗಳೂರು: ವೈಯಾಲಿಕಾವಲ್ ನಲ್ಲಿ ಮಹಾಲಕ್ಷ್ಮೀ ಎಂಬ ಮಹಿಳೆಯ ಬರ್ಬರ ಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ ದೊರೆತಿದ್ದು, ಪ್ರಕರಣದ ಶಂಕಿತ ಆರೋಪಿ ಒಡಿಶಾದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.
ಮುಕ್ತಿರಂಜನ್ ರಾಯ್ ಆತ್ಮಹತ್ಯೆ ಮಾಡಿಕೊಂಡ ಶಂಕಿತ ಕೊಲೆ ಆರೋಪಿಯಾಗಿದ್ದಾನೆ. ಮಹಾಲಕ್ಷ್ಮೀ ಹತ್ಯೆಯ ನಂತರ ಈತ ಪೊಲೀಸರಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಎಂದು ತಿಳಿದು ಬಂದಿದೆ.
ಮಹಾಲಕ್ಷ್ಮೀ ಕೆಲಸ ಮಾಡುತ್ತಿದ್ದ ಶಾಪ್‌ನ ಟೀಂ ಲೀಡರ್ ಆಗಿ ಮುಕ್ತಿರಂಜನ್ ಕೆಲಸ ಮಾಡುತ್ತಿದ್ದನಂತೆ. ಪೊಲೀಸರ ಅಂದಾಜಿನ ಪ್ರಕಾರ ಸೆಪ್ಟಂಬರ್ 2 ಅಥವಾ 3ರಂದು ಕೊಲೆಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಹಾಲಕ್ಷ್ಮೀ ಹತ್ಯೆ ಪ್ರಕರಣದ ನಂತರ ಶಾಪ್ ನ ಟೀಂ ಲೀಡರ್ ಮುಕ್ತಿರಂಜನ್ ಕೂಡ ಕೆಲಸಕ್ಕೆ ಬಂದಿರಲಿಲ್ಲ. ಇದು ಹಲವಾರು ಅನುಮಾನಗಳಿಗೆ ಕಾರಣವಾಗಿತ್ತು. ಒಡಿಶಾದಲ್ಲಿ ಹಂತಕ ಇರುವ ಶಂಕೆ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿದ್ದರು. ಆದ್ರೆ ಇದೀಗ ಆತ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q