ತುರುವೇಕೆರೆ: ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ದಂಡಾಧಿಕಾರಿ ಕುಂ ಹಿ ಅಹಮದ್ ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಟಿ ಹೆಚ್ ಓ ರಂಗನಾಥ್, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶ್ರೀನಾಥ್ ಬಾಬು ಉಪಸ್ಥಿತಿಯಲ್ಲಿ ಪಲ್ಸ್ ಪೋಲಿಯೋ ಕುರಿತು ಪತ್ರಿಕಾ ಮಾಧ್ಯಮಗೋಷ್ಠಿಯನ್ನು ನಡೆಸಲಾಯಿತು.
ಇದೇ ವೇಳೆ ಟಿಹೆಚ್ ಓ ರಂಗನಾಥ್ ಮಾತನಾಡಿ, ರಾಜ್ಯದ್ಯಂತ ಡಿಸೆಂಬರ್ 21ನೇ ಭಾನುವಾರದಂದು ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಮ್ಮ ತುರುವೇಕೆರೆ ತಾಲೂಕಿನಲ್ಲೂ ಪಲ್ಸ್ ಪೋಲಿಯೋ ನಿಮಿತ್ತ ತಾಲೂಕಿನಲ್ಲಿ ಸುಮಾರು 90 ಬೂತ್ ಗಳನ್ನು ನಿರ್ಮಿಸಲಾಗಿದ್ದು ಡಿಸೆಂಬರ್ 21 ಭಾನುವಾರ ಬೆಳಿಗ್ಗೆ 8ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದ್ದು, ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೂ ಪೋಷಕರು ಪಲ್ಸ್ ಪೋಲಿಯ ಲಸಿಕೆಯನ್ನು ಹಾಕಿಸಿ ಎಂದರು.
ಜೊತೆಗೆ ತಾಲೂಕಿನಾದ್ಯಂತ ಎಲ್ಲಾ ಬೂತ್ ಗಳಲ್ಲಿ ನಮ್ಮ ಆರೋಗ್ಯ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಮತ್ತು ಸ್ವಯಂ ಪ್ರೇರಿತ ಕಾರ್ಯಕರ್ತರು ಸೇರಿದಂತೆ ಕಾರ್ಯನಿರ್ವಹಿಸಲಿದ್ದು, ಜೊತೆಗೆ ಆರೋಗ್ಯ ಇಲಾಖೆಯಿಂದ ದಿನಾಂಕ 22 ರಿಂದ 24 ನೇ ತಾರೀಖಿನವರೆಗೂ ನಮ್ಮ ಆರೋಗ್ಯ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ತಾಲೂಕಿನ ಅತ್ಯಂತ ಪ್ರತಿ ಮನೆಗೂ ಭೇಟಿ ನೀಡಿ 5 ವರ್ಷ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಲಿದ್ದಾರೆ. ಇದಲ್ಲದೆ ಟ್ರಾನ್ಸಿಸ್ಟ್ ಕೇಂದ್ರಗಳಲ್ಲಿ ತಾಲೂಕಿನ ವ್ಯಾಪ್ತಿಯಲ್ಲಿರುವ ಅಮ್ಮಸಂದ್ರದ ರೈಲ್ವೆ ಸ್ಟೇಷನ್ ಬಳಿ, ತುರುವೇಕೆರೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಬಳಿ, ಮಲ್ಲಾಗಟ್ಟ ಗಂಗಾಧರೇಶ್ವರ ದೇವಸ್ಥಾನದ ಬಳಿ, ಬಾಣಸಂದ್ರ ರೈಲ್ವೆ ನಿಲ್ದಾಣದ ಬಳಿ, ಸತತ ಮೂರು ದಿನಗಳ ಕಾಲ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಲಾಗುವುದು ಹಾಗಾಗಿ ಐದು ವರ್ಷ ಒಳಗಿನ ಮಕ್ಕಳಿಗೆ ತಾಯಂದಿರುಗಳು ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಎಂದು ಮನವಿ ಮಾಡಿದರು.
ನಂತರ ತಾಲೂಕು ತಹಶೀಲ್ದಾರ್ ಕುಂ.ಹಿ.ಅಹಮದ್ ಮಾತನಾಡಿ, ಈಗಾಗಲೇ 2014 ರಲ್ಲಿ ಪೋಲಿಯೋ ಲಸಿಕೆ ಕುರಿತು ಪೋಲಿಯೋ ಮುಕ್ತ ಭಾರತ ಎಂದು ವಿಶ್ವ ಆರೋಗ್ಯ ಸಂಸ್ಥೆಯಿಂದ ದೃಢೀಕರಣ ಪಡೆದಿದ್ದು ಹಾಗಾಗಿ ಈ ವರ್ಷವೂ ಕೂಡ ನಮ್ಮ ತಾಲೂಕಿನಲ್ಲಿ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನವನ್ನು ಆರಂಭಿಸುತ್ತಿದ್ದು, ರಾಜ್ಯ ಸರ್ಕಾರದ ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ನಮ್ಮ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ನಮ್ಮ ತಾಲೂಕು ಆಡಳಿತ ಸೇರಿದಂತೆ ತುರುವೇಕೆರೆ ತಾಲೂಕಿನಾದ್ಯಂತ ಇದೇ ತಿಂಗಳು ದಿನಾಂಕ 21 ರಿಂದ 24ರ ವರೆಗೆ ಈ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದ್ದು, ತಾಲೂಕಿನ ಪ್ರತಿ ಹಳ್ಳಿಗಳಲ್ಲೂ ಐದು ವರ್ಷ ಒಳಗಿನ ಮಕ್ಕಳಿಗೆ ಲಸಿಕೆಯನ್ನು ಹಾಕಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಎಂದು ವಿನಂತಿಸಿದರು.
ವರದಿ: ಮಂಜುನಾಥ್ ಕೆ.ಎ., ತುರುವೇಕೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


