ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣ ಪಂಚಾಯತಿ ಕಾರ್ಯಾಲಯದಲ್ಲಿ ಖಾಲಿ ಇರುವ ಸಮುದಾಯ ಸಂಘಟಕ ಹುದ್ದೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಡೇ–ನಲ್ಮ್ ಅಡಿ ನೋಂದಾಯಿತ ಆಸಕ್ತ ಸ್ವಸಹಾಯ ಗುಂಪಿನ ಸದಸ್ಯರು ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಯು ತುರುವೇಕೆರೆ ಪಟ್ಟಣ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ 2.0 ಅಡಿ ಐಐಸಿ ಚಟುವಟಿಕೆಗಳನ್ನು ಕೈಗೊಳ್ಳಬೇಕು.
ಅರ್ಜಿದಾರರು ಭರ್ತಿ ಮಾಡಿದ ಅರ್ಜಿಯೊಂದಿಗೆ ಗುರುತಿನ ಪುರಾವೆ, ವಿಳಾಸದ ಪುರಾವೆ, ಡೇ-ನಲ್ಮ್ ಅಡಿ ಎಸ್‌ಹೆಚ್‌ಜಿನಲ್ಲಿ ನೋಂದಾಯಿಸಿಕೊಂಡಿರುವುದಕ್ಕೆ (ಎಂಪ್ಯಾನಲ್) ದಾಖಲೆ, ಶೈಕ್ಷಣಿಕ ಅರ್ಹತೆ ದಾಖಲೆ, ಡೇ-ನಲ್ಮ್ ನಿಂದ ಹಿಂಬರಹ ನಮೂನೆ, ಕಂಪ್ಯೂಟರ್ ಸಾಕ್ಷರತೆ ಕಲಿತ ದಾಖಲಾತಿಗಳನ್ನು ಲಗತ್ತಿಸಿ ಸೆಪ್ಟೆಂಬರ್ 25ರೊಳಗೆ ಸಲ್ಲಿಸಬೇಕೆಂದು ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
