ತುರುವೇಕೆರೆ: ಪಟ್ಟಣದ ಬಸವೇಶ್ವರ ನಗರದಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ವತಿಯಿಂದ ಶ್ರೀ ಶಬರಿಮಲೆ ಅಯ್ಯಪ್ಪ ಸ್ವಾಮಿಯವರ ಮಂಡಲ ಪೂಜೆ ಮತ್ತು ಜ್ಯೋತಿ ಮಹೋತ್ಸವದ ಪ್ರಯುಕ್ತ ಶ್ರೀ ಅಯ್ಯಪ್ಪಸ್ವಾಮಿ ಭಕ್ತವೃಂದದವರಿಂದ ಶ್ರೀ ಅಯ್ಯಪ್ಪಸ್ವಾಮಿಯ ಉತ್ಸವದ ಅಂಗವಾಗಿ ಜ್ಯೋತಿ ಮೆರವಣಿಗೆಯನ್ನು ಶನಿವಾರ ಸಂಜೆ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪುಟಾಣಿ ಮಕ್ಕಳು ಜ್ಯೋತಿ ಹಿಡಿದು ಭಕ್ತಿಭಾವದಿಂದ ಹೆಜ್ಜೆ ಹಾಕಿದರೆ, ಸಮಿತಿಯ ಪದಾಧಿಕಾರಿಗಳು ಹಾಗೂ ಮಾಲಾಧಾರಿಗಳು ಶ್ರೀ ಅಯ್ಯಪ್ಪ ಸ್ವಾಮಿಯ ನಾಮಸ್ಮರಣೆಯೊಂದಿಗೆ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಜ.7ರಂದು ಬುಧವಾರ ಮಧ್ಯಾಹ್ನ ಸಾರ್ವಜನಿಕರಿಂದ ಸಾರ್ವಜನಿಕರಿಗೆ ಅನ್ನದಾನ ಏರ್ಪಡಿಸಲಾಗಿದೆ. ಅಂದು ಸಂಜೆ 7 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಗೆ ತುಪ್ಪದ ಅಭಿಷೇಕ, ಜ.8 ರಂದು ರಾತ್ರಿ 8:30ಕ್ಕೆ ಮಾಲಾಧಾರಿಗಳ ಸಮ್ಮುಖದಲ್ಲಿ ಮಹಾಮಂಗಳಾರತಿ ನಡೆಯಲಿದೆ.
ಜ.9ರಂದು ಬೆಳಿಗ್ಗೆ 9-30ಕ್ಕೆ ಮಾಲಾಧಾರಿಗಳಿಗೆ ಗುರುಸ್ವಾಮಿಗಳಿಂದ ಇರುಮುಡಿ ಸೇವೆ ಇದೆ. ಜ.10ರಂದು ಬೆಳಿಗ್ಗೆ 9:30ಕ್ಕೆ ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದಿಂದ ಮಾಲಾಧಾರಿಗಳ ಶುಭಯಾತ್ರೆ ಪ್ರಾರಂಭವಾಗಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


