ತುರುವೇಕೆರೆ: ಲಯನ್ಸ್ ಕ್ಲಬ್, ಕಲ್ಪತರು ಚಾರಿಟಬಲ್ ಟ್ರಸ್ಟ್, ಬಿಡಬ್ಲ್ಯು ಲಯನ್ಸ್ ಹಾಸ್ಪಿಟಲ್ ಬೆಂಗಳೂರು, ಜಿಲ್ಲಾ ಅಂಧತ್ವ ನಿವಾರಣಾ ಕೇಂದ್ರ, ತಾಲ್ಲೂಕು ಆರೋಗ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ತಾಲ್ಲೂಕಿನ ಹೆಗ್ಗೆರೆಯ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಮೇ 10 ರಂದು ಬೆಳಿಗ್ಗೆ 9 ಗಂಟೆಯಿಂದ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ, ರಕ್ತದೊತ್ತಡ, ಶುಗರ್ ಮತ್ತಿತರ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.
ಶ್ರೀ ವೆಂಕಟೇಶ್ವರ ಸೇವಾ ಟ್ರಸ್ಟ್‌ನ ಅಧ್ಯಕ್ಷರಾದ ಎಚ್.ಎನ್.ಗಂಗಾಧರಯ್ಯ ಕಾರ್ಯಕ್ರಮ ಉದ್ಘಾಟಿಸುವರು.
ಈ ಸಂದರ್ಭದಲ್ಲಿ ಡಾ.ಚೌದ್ರಿ ನಾಗೇಶ್, ಡಾ.ಹರ್ಷಿತ್, ಎಚ್.ಆರ್.ರಂಗನಾಥ್, ಡಾ.ಎ.ನಾಗರಾಜು, ಕೀಲು ಮತ್ತು ಮೂಳೆ ತಜ್ಞರಾದ ಡಾ.ಸುನೀಲ್‌ಕುಮಾರ್ ಮತ್ತಿತರರು ಭಾಗವಹಿಸುವರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


