ತುರುವೇಕೆರೆ: ನನಗೂ ತುರುವೇಕರೆಗೂ ಅವಿನಾಭಾವ ಸಂಬಂಧವಿದ್ದು, ಕಳೆದ ಲೋಕಸಭಾ ಚುನಾವಣೆಯಲ್ಲಿ ನನಗೆ ಹೆಚ್ಚಿನ ಮತ ನೀಡಿದ ತಾಲೂಕು ಇದಾಗಿದ್ದು, ಈ ತಾಲೂಕಿನ ಜನತೆಗೆ ನಾನು ಚಿರರುಣಿ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದರು.
ಪಟ್ಟಣದಲ್ಲಿ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಲೋಕೇಶ್ ಅವರ ಪರ ಮತಯಾಚಿಸಿದ ಗೌಡರು, ಕಳೆದ ಚುನಾವಣೆಯಲ್ಲಿ ತಾಲೂಕಿನ ಜನತೆ ನೀಡಿದ ಬೆಂಬಲವನ್ನು ಸ್ಮರಿಸಿಕೊಂಡರು.
ಇನ್ನೂ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ, ದೇವೇಗೌಡರ ವಿರುದ್ಧ ಕೆ.ಎಂ.ರಾಜಣ್ಣ ನೀಡಿರುವ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿ, ದೇವೇಗೌಡರ ಬಗ್ಗೆ ಮಾತನಾಡಲು ಕೆ.ಎಂ.ರಾಜಣ್ಣ ಯಾರು? ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್, ಮಾಜಿ ಶಾಸಕ ಎಚ್.ಬಿ.ನಂಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷರು,ಲೀಲಾವತಿ ಗಿಡ್ಡಯ್ಯ ಮತ್ತಿತರು ಹಾಜರಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700