ತುರುವೇಕೆರೆ: ತುರುವೇಕೆರೆ ಪಟ್ಟಣ ಪಂಚಾಯಿತಿ ಬಿಜೆಪಿ ತೆಕ್ಕೆಗೆ ಜಾರಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪಟ್ಟ ಬಿಜೆಪಿ ಪಾಲಾಗಿದೆ.
ಹಾಲಿ ಹಾಗೂ ಮಾಜಿ ಶಾಸಕರ ಹಗ್ಗ ಜಗ್ಗಾಟದಲ್ಲಿ ಮಾಜಿ ಶಾಸಕ ಮಸಾಲ ಜಯರಾಮ್ ರವರ ಕೈ ಮೇಲಾಗಿದೆ. ಒಟ್ಟು 14 ಜನ ಸದಸ್ಯರನ್ನು ಹೊಂದಿರುವ ಪಟ್ಟಣ ಪಂಚಾಯಿತಿಯಲ್ಲಿ ಇಬ್ಬರು ಸದಸ್ಯರು ಗೈರಾಗಿದ್ದು, 12 ಜನ ಹಾಜರಿದ್ದು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ.
ಬೆಳಗ್ಗೆ 10:45 ರಿಂದ 12 ಗಂಟೆಯವರೆಗೂ ಚುನಾವಣಾ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ಆಶಾ ರಾಜಶೇಖರ್, ಉಪಾಧ್ಯಕ್ಷ ಸ್ಥಾನಕ್ಕೆ ಭಾಗ್ಯಮ್ಮಕ್ಕೆ ನಾಮಪತ್ರ ಸಲ್ಲಿಸಿದ್ದರು. 12 ಗಂಟೆವರೆಗೂ ಯಾವೊಬ್ಬರೂ ನಾಮಪತ್ರ ಸಲ್ಲಿಸದ ಕಾರಣ, ಆಶಾ ರಾಜಶೇಖರ್ ಅಧ್ಯಕ್ಷರನ್ನಾಗಿ ಮತ್ತು ಭಾಗ್ಯಮ್ಮ ಕೆ. ರವರನ್ನು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ ಮಾಡಲಾಗಿದೆ ಎಂದು ತಹಶೀಲ್ದಾರ್ ಕುಂಞ ಎಂ.ಎನ್. ಅಹಮದ್ ಘೋಷಣೆ ಮಾಡಿದ್ದಾರೆ.
ಕಾಂಗ್ರೆಸ್ ಸದಸ್ಯರು ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಕೂಡ ಚುನಾವಣೆಯಲ್ಲಿ ಕಾಂಗ್ರೆಸ್ ಸದಸ್ಯರು ಕೂಡ ಬಾಹ್ಯ ಬೆಂಬಲ ನೀಡಿದ್ದಾರೆ. ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಿಹಿ ಹಂಚಿಸಿ ಸಂಭ್ರಮಾಚರಣೆ ನಡೆಸಲಾಯಿತು.
ನಂತರ ಮಾತಾಡಿದ ನೂತನ ಅಧ್ಯಕ್ಷರು ಹಾಲಿ ಶಾಸಕ ಎಂ.ಟಿ.ಕೃಷ್ಣಪ್ಪ ಹಾಗೂ ಮಾಜಿ ಶಾಸಕ ಮಸಾಲ ಜೈರಾಮ್ ರವರಿಗೆ ನನ್ನನ್ನು ಅಧ್ಯಕ್ಷ ಪಟ್ಟಕ್ಕೆ ಆಯ್ಕೆ ಮಾಡಿದ್ದಕ್ಕೆ ಚಿರಋಣಿ ಹಾಗೂ ಪಟ್ಟಣ ಪಂಚಾಯಿತಿಯ ಎಲ್ಲಾ ಸದಸ್ಯರಿಗೂ ನಾನು ಧನ್ಯವಾದಗಳು ತಿಳಿಸುತ್ತೇನೆ ಎಂದರು.
ಹಾಲಿ ಶಾಸಕ ಎಂ.ಟಿ.ಕೃಷ್ಣಪ್ಪ ಮತ್ತು ನಿಕಟಪೂರ್ವ ಶಾಸಕ ಮಸಾಲ ಜಯರಾಮ್ ಪರ ಕಾರ್ಯಕರ್ತರು ಜೈಕಾರ ಹಾಕಿದರು. ಮೈತ್ರಿ ಪಕ್ಷದ ಮುಖಂಡರುಗಳು ಹಾಗೂ ಬೆಂಬಲಿಗರು ಹಾಜರಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q